ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಪರಿಷ್ಕೃತ ವರದಿ
Posted On:
13 AUG 2021 9:19AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 52.95 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,85,227ಕ್ಕೆ ಇಳಿಕೆ ಕಂಡಿದೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.20%; 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಕನಿಷ್ಠ ಪ್ರಮಾಣ ಇದಾಗಿದೆ.
ದೇಶದಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,13,02,345 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 42,295 ರೋಗಿಗಳು ಚೇತರಿಸಿಕೊಂಡಿದ್ದಾರೆ.
ಇದರೊಂದಿಗೆ ಅತ್ಯಧಿಕ ಚೇತರಿಕೆ ದರ ದಾಖಲಾಗಿದ್ದು, ಅದೀಗ 97.46%ಗೆ ಸುಧಾರಣೆ ಕಂಡಿದೆ.
ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 40,120 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ವಾರದ ಪಾಸಿಟಿವಿಟಿ ದರ ನಿರಂತರ 5% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ ಅದು 2.13%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರ 2.04%ಗೆ ಕುಸಿದಿದ್ದು, ಸತತ 18 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.
ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇಲ್ಲಿಯ ತನಕ 48.94 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1745375)
Visitor Counter : 244