ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಭರದಿಂದ ಸಾಗಿರುವ ಲಸಿಕೆ ಅಭಿಯಾನ; ದೇಶಾದ್ಯಂತ ಸುಮಾರು 53 ಕೋಟಿ ಡೋಸ್ ಲಸಿಕೆ ನೀಡಿಕೆ


ಕಳೆದ 24 ತಾಸುಗಳಲ್ಲೇ ದೇಶಾದ್ಯಂತ 57 ಲಕ್ಷಕ್ಕಿಂತ ಹೆಚ್ಚಿನ ಡೋಸ್ ಲಸಿಕೆ ನೀಡಿಕೆ

ಗರಿಷ್ಠ ಮಟ್ಟಕ್ಕೆ ಚೇತರಿಕೆ ದರ; 97.46%ಗೆ ಸುಧಾರಣೆ

ಕಳೆದ 24 ತಾಸುಗಳಲ್ಲಿ 40,120 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 3,85,227ಕ್ಕೆ ಇಳಿಕೆ; ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಪಾಸಿಟಿವ್ ಪ್ರಕರಣಗಳ ಪ್ರಮಾಣ 1.20% ಮಾತ್ರ

ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆ; ಸತತ 18 ದಿನಗಳಿಂದ 3% ಮಟ್ಟದ ಒಳಗೆ

Posted On: 13 AUG 2021 10:22AM by PIB Bengaluru

ಭಾರತದಲ್ಲಿ ಶರವೇಗದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ ಸುಮಾರು 53 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಅಂದರೆ, 52,95,82,956 ಡೋಸ್ ಲಸಿಕೆ ಹಾಕಲಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬಿಡುಗಡೆಯಾಗಿರುವ ತಾತ್ಕಾಲಿಕ ವರದಿಯ ಪ್ರಕಾರ, 60,40,607 ಆಂದೋಲನಗಳಲ್ಲಿ ಈ ಸಾಧನೆ ಮಾಡಲಾಗಿದೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲೇ 57,31,574 ಡೋಸ್ ಲಸಿಕೆ ಹಾಕಲಾಗಿದೆ.

ಅವುಗಳಲ್ಲಿ ಈ ಕೆಳಗಿನ ಗುಂಪುಗಳು ಸೇರಿವೆ:

ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು

ಮೊದಲ ಡೋಸ್

1,03,43,406

2ನೇ ಡೋಸ್

80,50,401

ಮುಂಚೂಣಿ ಕಾರ್ಯಕರ್ತರು

ಮೊದಲ ಡೋಸ್

1,82,54,407

2ನೇ ಡೋಸ್

1,19,88,029

18-44 ವಯೋಮಾನದವರು

ಮೊದಲ ಡೋಸ್

18,80,51,247

2ನೇ ಡೋಸ್

1,39,53,516

45-59 ವಯೋಮಾನದವರು

ಮೊದಲ ಡೋಸ್

11,48,89,656

2ನೇ ಡೋಸ್

4,44,21,296

60 ವರ್ಷ ದಾಟಿದವರು

ಮೊದಲ ಡೋಸ್

8,00,90,640

2ನೇ ಡೋಸ್

3,95,40,358

ಒಟ್ಟು

52,95,82,956

ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ಕೇಂದ್ರ ಸರ್ಕಾರ ದೇಶಾದ್ಯಂತ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಬದ್ಧವಾಗಿದೆ.

ಭಾರತದ ಚೇತರಿಕೆ ದರ ಇದೀಗ 97.46%ಗೆ ಸುಧಾರಣೆ ಕಂಡಿದೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಚೇತರಿಕೆ ದರದಲ್ಲಿ ಅತ್ಯಂತ ಗರಿಷ್ಠ ಸುಧಾರಣೆ ಕಂಡುಬಂದಿದೆ.

ಸೋಂಕು ಕಾಣಿಸಿಕೊಂಡ ಆರಂಭದಿಂದ ಇದುವರೆಗೆ 3,13,02,345 ಜನರು ಈಗಾಗಲೇ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 42,295 ಮಂದಿ ಚೇತರಿಸಿಕೊಂಡಿದ್ದಾರೆ.

https://static.pib.gov.in/WriteReadData/userfiles/image/image001ECTP.jpg

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 40,120 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಸತತ 47 ದಿನಗಳಿಂದ ದಿನನಿತ್ಯ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ 50,000 ಮಟ್ಟದಿಂದ ಕೆಳಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ, ಹೊಸ ಕೊರೊನಾ ಪ್ರಕರಣಗಳು ದಿನೇದಿನೆ ಇಳಿಕೆಯಾಗುತ್ತಿವೆ.

https://static.pib.gov.in/WriteReadData/userfiles/image/image002RQWV.jpg

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,85,227ಕ್ಕೆ ಇಳಿಕೆ ಕಂಡಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.20% ಇದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಕನಿಷ್ಠ ಪ್ರಮಾಣ ಇದಾಗಿದೆ.

https://static.pib.gov.in/WriteReadData/userfiles/image/image003QDWL.jpg

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಕಳೆದ 24 ತಾಸಸುಗಳಲ್ಲೇ 19,70,495 ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೆ ದೇಶಾದ್ಯಂತ ಒಟ್ಟಾರೆ 48.94 ಕೋಟಿ ಅಂದರೆ 48,94,70,779 ಪರೀಕ್ಷೆಗಳನ್ನು ನಡೆಸಲಾಗಿದೆ.

ಒಂದೆಡೆ ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 2.13% ಮತ್ತು ದೈನಂದಿನ ಪಾಸಿಟಿವಿಟಿ ದರ 2.04%ಗೆ ಇಳಿಕೆಯಾಗಿದೆ. ಸತತ 18 ದಿನಗಳಿಂದ ದೈನಂದಿನ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 67 ದಿನಗಳಿಂದ 5% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ.

https://static.pib.gov.in/WriteReadData/userfiles/image/image004FS0B.jpg

***



(Release ID: 1745377) Visitor Counter : 240