ಪ್ರಧಾನ ಮಂತ್ರಿಯವರ ಕಛೇರಿ

ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಪ್ರಧಾನ ಮಂತ್ರಿ

Posted On: 13 AUG 2021 11:35AM by PIB Bengaluru

ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ: "ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆಸ್ಕ್ರ್ಯಾಪಿಂಗ್‌ ಮೂಲಸೌಕರ್ಯ ಸ್ಥಾಪನೆಗಾಗಿ ಗುಜರಾತ್‌ನಲ್ಲಿ ಹೂಡಿಕೆದಾರರ ಶೃಂಗಸಭೆಯು ಹೊಸ ಶ್ರೇಣಿಯ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾನು ನಮ್ಮ ಯುವ ಮತ್ತು ನವೋದ್ಯಮಗಳನ್ನು ವಿನಂತಿಸುತ್ತೇನೆ.”

ಅನರ್ಹ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಲು ವಾಹನ ಸ್ಕ್ರ್ಯಾಪಿಂಗ್ ನೀತಿಯು ಸಹಾಯ ಮಾಡುತ್ತದೆ. ಕಾರ್ಯಸಾಧ್ಯವಾದ ವರ್ತುಲ ಆರ್ಥಿಕತೆಯನ್ನು(#circulareconomy) ಅಭಿವೃದ್ಧಿಪಡಿಸುವುದು ಹಾಗೂ ಪರಿಸರದ ಬಗ್ಗೆ ಜವಾಬ್ದಾರಿಯೊಂದಿಗೆ ಎಲ್ಲಾ ಮಧ್ಯಸ್ಥಗಾರರಿಗೆ ಮೌಲ್ಯವನ್ನು ತರುವುದು ನಮ್ಮ ಉದ್ದೇಶವಾಗಿದೆ." ಎಂದಿದ್ದಾರೆ.

***(Release ID: 1745379) Visitor Counter : 172