ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 14 AUG 2021 8:55AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಬೃಹತ್ ಲಸಿಕೆ ಅಭಿಯಾನದಲ್ಲಿ ಇದುವರೆಗೆ 53.61 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,87,673ಕ್ಕೆ ಇಳಿಕೆ ಕಂಡಿದೆ.

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.21% ಇದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 35,743 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 3,13,38,088 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದರೊಂದಿಗೆ ಒಟ್ಟಾರೆ ಚೇತರಿಕೆ ದರ ಪ್ರಸ್ತುತ 97.45%ಗೆ ಸುಧಾರಣೆ ಕಂಡಿದೆ.

ದೇಶದಲ್ಲಿ ಕಳೆದ 24 ತಾಸುಗಳಲ್ಲಿ 38,667 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ವಾರದ ಪಾಸಿಟಿವಿಟಿ ದರ ನಿರಂತರ 5% ಮಟ್ಟದ ಕೆಳಗೆ ಕಾಯ್ದುಕೊಂಡಿದ್ದು, ಅದೀಗ 2.05%ಗೆ ಇಳಿಕೆ ಕಂಡಿದೆ.

ದೈನಂದಿನ ಪಾಸಿಟಿವಿಟಿ ದರ 1.73%ಗೆ ಇಳಿದಿದ್ದು, ಸತತ 19 ದಿನಗಳಿಂದ 3% ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದ್ದು, ಇದುವರೆಗೆ 49.17 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1745803) Visitor Counter : 259