ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
azadi ka amrit mahotsav

ಕೋವಿಡ್-19 ಇಂದಿನ ಪರಿಷ್ಕೃತ ವರದಿ

Posted On: 16 AUG 2021 10:21AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 54.58 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,81,947ಕ್ಕೆ ಇಳಿಕೆ ಕಂಡಿದೆ. ಕಳೆದ 145 ದಿನಗಳಲ್ಲಿ ಅತ್ಯಂತ ಕನಿಷ್ಠ ಪ್ರಮಾಣ ಇದಾಗಿದೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ 1.18%  ಇದೆ.
ದೇಶದಲ್ಲಿ ಕಾರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,14,11,924 ಮಂದಿ ಗುಣಮುಖರಾಗಿದ್ದಾರೆ. 
ಕಳೆದ 24 ತಾಸುಗಳಲ್ಲೇ 35,909 ರೋಗಿಗಳು ಗುಣಮುಖರಾಗಿದ್ದಾರೆ.
ಇದರೊಂದಿಗೆ, ಕೊರೊನಾ ಸೋಂಕಿನ ಚೇತರಿಕೆ ದರ ಇದೀಗ 97.48%ಗೆ ಸುಧಾರಣೆ ಕಂಡಿದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಗರಿಷ್ಠ ದರ ಇದಾಗಿದೆ.
ಭಾರತದಲ್ಲಿ ಕಳೆದ 24 ತಾಸುಗಳಲ್ಲಿ 32,937 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 
ವಾರದ ಪಾಸಿಟಿವಿಟಿ ದರ 5% ಮಟ್ಟದಿಂದ ಕೆಳಗಿದ್ದು, ಪ್ರಸ್ತುತ ಅದೀಗ 2.01%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರ 2.79%ಗೆ ಇಳಿಕೆ ಕಂಡಿದ್ದು, ಸತತ 21 ದಿನಗಳಿಂದ 3%  ಮಟ್ಟದಿಂದ ಕೆಳಗಿದೆ.
ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 49.48 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

***


(Release ID: 1746399) Visitor Counter : 257