ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಟೋಕಿಯೋ 2020 ಪ್ಯಾರಾಲಿಂಪಿಕ್ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ತಂಡದೊಂದಿಗೆ ಆಗಸ್ಟ್ 17ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 15 AUG 2021 7:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋ 2020 ಪ್ಯಾರಾಲಿಂಪಿಕ್ ನಲ್ಲಿ ಪಾಲ್ಗೊಳ್ಳುತ್ತಿರುವ ಪ್ಯಾರಾ ಅಥ್ಲೀಟ್ ತಂಡದೊಂದಿಗೆ ಆಗಸ್ಟ್ 17ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. 
9 ಕ್ರೀಡೆಗಳ 54 ಪ್ಯಾರಾ ಅಥ್ಲೀಟ್ ಗಳು ರಾಷ್ಟ್ರವನ್ನು ಪ್ರತಿನಿಧಿಸಲು ಟೋಕಿಯೊಗೆ ಹೋಗುತ್ತಿದ್ದಾರೆ. ಇದು ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಅತಿದೊಡ್ಡ ತಂಡವಾಗಿದೆ. ಸಂವಾದದ ಸಮಯದಲ್ಲಿ ಕೇಂದ್ರ ಕ್ರೀಡಾ ಸಚಿವರು ಸಹ ಹಾಜರಿರುತ್ತಾರೆ.

***


(ಪ್ರಕಟಣೆ ಐ.ಡಿ.: 1746413) ವಿಸಿಟರ್ ಕೌಂಟರ್ : 257
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam