ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ

ಟೋಕಿಯೋ 2020 ಪ್ಯಾರಾಲಿಂಪಿಕ್ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ತಂಡದೊಂದಿಗೆ ಆಗಸ್ಟ್ 17ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ

Posted On: 16 AUG 2021 11:53AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋ 2020 ಪ್ಯಾರಾಲಿಂಪಿಕ್ ನಲ್ಲಿ ಪಾಲ್ಗೊಳ್ಳುತ್ತಿರುವ ಪ್ಯಾರಾ ಅಥ್ಲೀಟ್ ತಂಡದೊಂದಿಗೆ ಆಗಸ್ಟ್ 17ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಲಿದ್ದಾರೆ. 
9 ಕ್ರೀಡೆಗಳ 54 ಪ್ಯಾರಾ ಅಥ್ಲೀಟ್ ಗಳು ರಾಷ್ಟ್ರವನ್ನು ಪ್ರತಿನಿಧಿಸಲು ಟೋಕಿಯೊಗೆ ಹೋಗುತ್ತಿದ್ದಾರೆ. ಇದು ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ಅತಿದೊಡ್ಡ ತಂಡವಾಗಿದೆ. ಸಂವಾದದ ಸಮಯದಲ್ಲಿ ಕೇಂದ್ರ ಕ್ರೀಡಾ ಸಚಿವರು ಸಹ ಹಾಜರಿರುತ್ತಾರೆ.

****



(Release ID: 1746489) Visitor Counter : 262