ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಭಾರತದಲ್ಲಿ 57.22 ಕೋಟಿ ಡೋಸ್ ದಾಟಿದ ಕೋವಿಡ್-19 ಲಸಿಕೆ ನೀಡಿಕೆ ಪ್ರಮಾಣ


ಕೋವಿಡ್ ಸೋಂಕಿತರ ಚೇತರಿಕೆ ದರ 97.54%ಗೆ ಸುಧಾರಣೆ; 2020 ಮಾರ್ಚ್ ನಿಂದ ಆಗಿರುವ ಗರಿಷ್ಠ ಚೇತರಿಕೆ ದರ

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 36,571 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 3,63,605ಕ್ಕೆ ಇಳಿಕೆ; 150 ದಿನಗಳಲ್ಲೇ ಅತ್ಯಂತ ಕನಿಷ್ಠ

ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1.12%ಗೆ ಇಳಿಕೆ; 2020 ಮಾರ್ಚ್ ನಿಂದ ಅತ್ಯಂತ ಕನಿಷ್ಠ

ದೈನಂದಿನ ಪಾಸಿಟಿವಿಟಿ ದರ 1.94%ಗೆ ಇಳಿಕೆ; ಸತತ 25 ದಿನಗಳಿಂದ 3% ಮಟ್ಟದಿಂದ ಕೆಳಗೆ

Posted On: 20 AUG 2021 9:59AM by PIB Bengaluru

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 54,71,282 ಡೋಸ್ ಕೋವಿಡ್-19 ಲಸಿಕೆ ಹಾಕುವುದರೊಂದಿಗೆ, ಭಾರತದಲ್ಲಿ ಇದುವರೆಗೆ ಒಟ್ಟು 57.22 ಕೋಟಿಗಿಂತ ಹೆಚ್ಚಿನ ಅಂದರೆ 57,22,81,488 ಡೋಸ್ ಲಸಿಕೆ ನೀಡಲಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಬಿಡುಗಡೆ ಆಗಿರುವ ತಾತ್ಕಾಲಿಕ ವರದಿಯ ಪ್ರಕಾರ, 63,56,785 ಆಂದೋಲನಗಳಲ್ಲಿ ಈ ಸಾಧನೆ ಮಾಡಲಾಗಿದೆ.

ಅದರಲ್ಲಿ ಈ ಕೆಳಗಿನ ಗುಂಪುಗಳು ಸೇರಿವೆ:

ಆರೋಗ್ಯ ಸಂರಕ್ಷಣಾ ಕಾರ್ಯಕರ್ತರು

ಮೊದಲ ಡೋಸ್

1,03,52,479

2ನೇ ಡೋಸ್

81,74,950

ಮುಂಚೂಣಿ ಕಾರ್ಯಕರ್ತರು

ಮೊದಲ ಡೋಸ್

1,82,98,488

2ನೇ ಡೋಸ್

1,24,35,280

18-44 ವಯೋಮಾನದವರು

ಮೊದಲ ಡೋಸ್

21,16,61,856

2ನೇ ಡೋಸ್

1,79,81,125

45-59 ವಯೋಮಾನದವರು

ಮೊದಲ ಡೋಸ್

12,13,60,599

2ನೇ ಡೋಸ್

4,77,77,706

60 ವರ್ಷ ದಾಟಿದವರು

ಮೊದಲ ಡೋಸ್

8,28,12,609

2ನೇ ಡೋಸ್

4,14,26,396

ಒಟ್ಟು

57,22,81,488

ದೇಶವ್ಯಾಪಿ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 36,555 ರೋಗಿಗಳು ಗುಣಮುಖರಾಗಿದ್ದು, ದೇಶದಲ್ಲಿ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಚೇತರಿಸಿಕೊಂಡವರ ಒಟ್ಟು ಸಂಖ್ಯೆ ಇದೀಗ 3,15,61,635ಕ್ಕೆ ಏರಿಕೆ ಕಂಡಿದೆ.

ಇದರ ಪರಿಣಾಮವಾಗಿ, ಭಾರತದ ಚೇತರಿಕೆ ದರ 97.54%ಗೆ ಸುಧಾರಣೆ ಕಂಡಿದೆ. 2020 ಮಾರ್ಚ್ ನಿಂದ ಇದುವರೆಗೆ ಆಗಿರುವ ಗರಿಷ್ಠ ಚೇತರಿಕೆ ದರ ಇದಾಗಿದೆ.

https://static.pib.gov.in/WriteReadData/userfiles/image/image001RT07.jpg

ಕೇಂದ್ರ ಸರಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ, ಸತತ 54 ದಿನಗಳಿಂದ ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಕೊರೊನಾ ಪ್ರಕರಣಗಳ ಪ್ರಮಾಣ 50,000 ಮಟ್ಟದಿಂದ ಕೆಳಗಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 36,571 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

https://static.pib.gov.in/WriteReadData/userfiles/image/image0029JRZ.jpg

ಅತ್ಯಂತ ಹೆಚ್ಚಿನ ಚೇತರಿಕೆ ಪ್ರಕರಣಗಳು ಮತ್ತು ಕಡಿಮೆ ಪ್ರಮಾಣದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳಿಂದಾಗಿ, ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,63,605ಕ್ಕೆ ಇಳಿಕೆ ಕಂಡಿದೆ, ಕಳೆದ 150 ದಿನಗಳಲ್ಲೇ ಅತ್ಯಂತ ಕನಿಷ್ಠ ಪ್ರಮಾಣ ಇದಾಗಿದೆ. ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಪ್ರಸ್ತುತ 1.12%ಗೆ ತಗ್ಗಿದೆ. 2020 ಮಾರ್ಚ್ ನಿಂದ ಇದು ಅತ್ಯಂತ ಕನಿಷ್ಠ.

https://static.pib.gov.in/WriteReadData/userfiles/image/image0039QMN.jpg

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗುತ್ತಿದ್ದು, ಕಳೆದ 24 ತಾಸುಗಳಲ್ಲೇ ದೇಶಾದ್ಯಂತ 18,86,271 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತದಲ್ಲಿ ಇದುವರೆಗೆ 50.26 ಕೋಟಿಗಿಂತ ಹೆಚ್ಚಿನ ಅಂದರೆ 50,26,99,702 ಪರೀಕ್ಷೆಗಳನ್ನು ನಡೆಸಲಾಗಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರವೀಗ 1.93%ಗೆ ತಗ್ಗಿದೆ. ಕಳೆದ 56 ದಿನಗಳಿಂದ ಅದು 3% ಮಟ್ಟದಿಂದ ಕೆಳಗೆ ಕಾಯ್ದುಕೊಂಡಿದೆ. ಅಂತೆಯೇ, ದೈನಂದಿನ ಪಾಸಿಟಿವಿಟಿ ದರವೂ 1.94%ಗೆ ಇಳಿಕೆಯಾಗಿದೆ. ಸತತ 25 ದಿನಗಳಿಂದ ಅದು 3% ಮಟ್ಟದಿಂದ ಕೆಳಗಿದೆ ಹಾಗೂ ನಿರಂತರ 74 ದಿನಗಳಿಂದ 5% ಮಟ್ಟದ ಕೆಳಗೆ ಕಾಯ್ದುಕೊಂಡಿದೆ.

https://static.pib.gov.in/WriteReadData/userfiles/image/image0046T14.jpg

***



(Release ID: 1747591) Visitor Counter : 272