ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
azadi ka amrit mahotsav

ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ಲಸಿಕೆ ಲಭ್ಯತೆಯ ಪರಿಷ್ಕೃತ ವರದಿ


ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿ ಡೋಸ್ ಗಿಂತ ಹೆಚ್ಚಿನ ಲಸಿಕೆ ಪೂರೈಕೆ

ಅತಿ ಶೀಘ್ರದಲ್ಲೇ 1 ಕೋಟಿಗಿಂತ ಹೆಚ್ಚಿನ ಲಸಿಕೆ ಪೂರೈಕೆ

ಪ್ರಕಟಣಾ ದಿನಾಂಕ: 24 AUG 2021 11:17AM by PIB Bengaluru

ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಬೃಹತ್ ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರಕಾರ ಬದ್ಧವಾಗಿದೆ. ಅಭಿಯಾನ ಸಾರ್ವತ್ರೀಕರಣದ ಹೊಸ ಹಂತ 2021 ಜೂನ್ 21ರಿಂದ ಆರಂಭವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚಿನ ಲಸಿಕೆ ಲಭ್ಯತೆ ಖಾತ್ರಿಪಡಿಸಿ, ಲಸಿಕೆ ಲಭ್ಯತೆಯ ಮುಂಗಡ ಗೋಚರತೆ ಖಚಿತಪಡಿಸಿ ಮತ್ತು ಲಸಿಕೆ ಪೂರೈಕೆ ಸರಪಳಿ ಸುಗಮಗೊಳಿಸುವ ಮೂಲಕ ಕೇಂದ್ರ ಸರ್ಕಾರವು ಲಸಿಕೆ ಅಭಿಯಾನಕ್ಕೆ ವೇಗ ನೀಡಿದೆ.

ದೇಶವ್ಯಾಪಿ ಲಸಿಕೆ ಅಭಿಯಾನದ ಭಾಗವಾಗಿ, ಭಾರತ ಸರ್ಕಾರ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ವಿತರಿಸಿ, ಬೆಂಬಲ ನೀಡುತ್ತಾ ಬಂದಿದೆ. ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆ ಅಭಿಯಾನ ಸಾರ್ವತ್ರೀಕರಣ ಭಾಗವಾಗಿ, ಕೇಂದ್ರ ಸರ್ಕಾರವು ದೇಶೀಯ ಲಸಿಕೆ ತಯಾರಿಕಾ ಕಂಪನಿಗಳಿಂದ 75% ಲಸಿಕೆಯನ್ನು ಖರೀದಿಸಿ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಪೂರೈಸುತ್ತಿದೆ.

ಲಸಿಕೆ ಡೋಸ್ ಗಳಲ್ಲಿ

24 ಆಗಸ್ಟ್ 2021

ಪೂರೈಕೆಯಾದ ಲಸಿಕೆ ಪ್ರಮಾಣ

57,15,22,580

ಸದ್ಯದಲ್ಲೇ ಲಭ್ಯವಾಗಲಿರುವ ಲಸಿಕೆ ಪ್ರಮಾಣ

1,00,84,700

ಬಳಕೆಯಾಗದೆ ಉಳಿದಿರುವ ಲಸಿಕೆ ಪ್ರಮಾಣ

3,29,58,715

ಭಾರತ ಸರ್ಕಾರ ಇದುವರೆಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 57.15 ಕೋಟಿಗಿಂತ ಹೆಚ್ಚಿನ ಅಂದರೆ 57,15,22,580 ಡೋಸ್ ಲಸಿಕೆಯನ್ನು ಉಚಿತವಾಗಿ ಪೂರೈಸಿದೆ. ಲಸಿಕಾ ತಯಾರಿಕಾ ಕಂಪನಿಗಳಿಂದ ನೇರವಾಗಿ ಲಸಿಕೆ ಖರೀದಿಸಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದ್ದು, ಇನ್ನೂ 1,00,84,700 ಡೋಸ್ ಲಸಿಕೆ ಅತಿ ಶೀಘ್ರವೇ ಲಭ್ಯವಾಗಲಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದೆ ಉಳಿದಿರುವ  3.29 ಕೋಟಿಗಿಂತ ಹೆಚ್ಚಿನ ಅಂದರೆ 3,29,58,715 ಡೋಸ್ ಲಸಿಕೆ ಬಳಕೆಗೆ ಲಭ್ಯವಿದೆ.

***


(ಪ್ರಕಟಣೆ ಐ.ಡಿ.: 1748513) ವಿಸಿಟರ್ ಕೌಂಟರ್ : 338
ಪ್ರಕಟಣೆಯನ್ನು ಇದರಲ್ಲಿ ಓದಿ: Malayalam , English , Urdu , Marathi , हिन्दी , Bengali , Manipuri , Punjabi , Gujarati , Tamil , Telugu