ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
Posted On:
25 AUG 2021 9:18AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 59.55 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 37.593 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿರುವ ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 1% ಮಟ್ಟದಿಂದ ಕೆಳಗಿದ್ದು, ಅದೀಗ 0.99%ಗೆ ತಗ್ಗಿದೆ.
ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,22,327ಕ್ಕೆ ಇಳಿಕೆ ಕಂಡಿದೆ.
ಚೇತರಿಕೆ ದರ ಪ್ರಸ್ತುತ 97.67%ಗೆ ಸುಧಾರಣೆ ಕಂಡಿದೆ.
ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 34,169 ಜನರು ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ ಒಟ್ಟು 3,17,54,281 ಜನರು ರೋಗದಿಂದ ಗುಣಮುಖರಾಗಿದ್ದಾರೆ.
ವಾರದ ಪಾಸಿಟಿವಿಟಿ ದರ 1.92%ಗೆ ಇಳಿಕೆ ಕಂಡಿದ್ದು, ಸತತ 61 ದಿನಗಳಿಂದ ಅದು 3% ಮಟ್ಟದಿಂದ ಕೆಳಗಿದೆ.
ದೈನಂದಿನ ಪಾಸಿಟಿವಿಟಿ ದರ 2.10%ಗೆ ಇಳಿಕೆ ಕಂಡಿದ್ದು, ಸತತ 30 ದಿನಗಳಿಂದ ಅದು 3% ಮಟ್ಟದಿಂದ ಕೆಳಗಿದೆ.
ದೇಶಾದ್ಯಂತ ಇದುವರೆಗೆ 51.11 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
***
(Release ID: 1748817)
Visitor Counter : 206
Read this release in:
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam