ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದ ದೇವೇಂದ್ರ ಜಜಾರಿಯಾ ಅವರಿಗೆ ಪ್ರಧಾನಿ ಅಭಿನಂದನೆ
ಪ್ರಕಟಣಾ ದಿನಾಂಕ:
30 AUG 2021 9:47AM by PIB Bengaluru
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದ ದೇವೇಂದ್ರ ಜಜಾರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಯವರು, "ದೇವ್ಜಾಜಾರಿಯಾ ಅವರ ಅವರಿಂದ ಅದ್ಭುತವಾದ ಪ್ರದರ್ಶನ! ನಮ್ಮ ಅತ್ಯಂತ ಅನುಭವಿ ಕ್ರೀಡಾಪಟು ಬೆಳ್ಳಿ ಪದಕ ಗೆದ್ದಿದ್ದಾರೆ. ದೇವೇಂದ್ರ ಅವರು ಭಾರತಕ್ಕೆ ನಿರಂತರವಾಗಿ ಹೆಮ್ಮೆ ತರುತ್ತಿದ್ದಾರೆ. ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭವಾಗಲಿ. #Paralympics" ಎಂದು ಹೇಳಿದ್ದಾರೆ.
****
(ಪ್ರಕಟಣೆ ಐ.ಡಿ.: 1750457)
ವಿಸಿಟರ್ ಕೌಂಟರ್ : 268
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam