ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ವಿನೋದ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 29 AUG 2021 6:49PM by PIB Bengaluru

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗೆದ್ದ ವಿನೋದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ  ಪ್ರಧಾನಿಯವರು, "ವಿನೋದ್ ಕುಮಾರ್ ಅವರ ಅದ್ಭುತ ಪ್ರದರ್ಶನದಿಂದಾಗಿ ಭಾರತವು ಸಂತೋಷಪಡುತ್ತಿದೆ! ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಕಠಿಣ ಪರಿಶ್ರಮ ಮತ್ತು ದೃಢ ನಿಶ್ಚಯವು ಅತ್ಯುತ್ತಮ ಫಲಿತಾಂಶವನ್ನು ನೀಡಿದೆ. #Paralympics" ಎಂದು ಹೇಳಿದ್ದಾರೆ.

 


 

***



(Release ID: 1750464) Visitor Counter : 170