ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ ಪ್ರಧಾನಿ
ಪ್ರಕಟಣಾ ದಿನಾಂಕ:
31 AUG 2021 10:42AM by PIB Bengaluru
ಅಸ್ಸಾಂನ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ಪಡೆದರು. ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಅಸ್ಸಾಂ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ @himantabiswa ಅವರೊಂದಿಗೆ ಮಾತನಾಡಿ, ರಾಜ್ಯದ ಕೆಲವು ಭಾಗಗಳಲ್ಲಿನ ಪ್ರವಾಹ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದೆ. ಪ್ರವಾಹ ಪೀಡಿತ ಪ್ರದೇಶಗಳ ನಿವಾಸಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ," ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1750688)
ವಿಸಿಟರ್ ಕೌಂಟರ್ : 229
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam