ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾಗೌರ್ ರಸ್ತೆ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಲು ಪ್ರಧಾನಿ ಅನುಮೋದನೆ

ಪ್ರಕಟಣಾ ದಿನಾಂಕ: 31 AUG 2021 12:06PM by PIB Bengaluru

ರಾಜಸ್ಥಾನದ ನಾಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರ ವಿತರಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅನುಮೋದನೆ ನೀಡಿದ್ದಾರೆ.

ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿಗಳ  ಕಾರ್ಯಾಲಯ, "ರಾಜಸ್ಥಾನದ ನಗೌರ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ʻಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿʼಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲು ಪ್ರಧಾನಿ ಅನುಮೋದನೆ ನೀಡಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು," ಎಂದು ತಿಳಿಸಿದೆ.

***


(ಪ್ರಕಟಣೆ ಐ.ಡಿ.: 1750690) ವಿಸಿಟರ್ ಕೌಂಟರ್ : 223