ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ನಲ್ಲಿ ಬೆಳ್ಳಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಅವರಿಗೆ ಪ್ರಧಾನಿ ಅಭಿನಂದನೆ

ಪ್ರಕಟಣಾ ದಿನಾಂಕ: 31 AUG 2021 6:01PM by PIB Bengaluru

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,

"ಎತರೆತ್ತರಕ್ಕೆ ಏರುತಿಹುದು!

ಮರಿಯಪ್ಪನ್ ತಂಗವೇಲು ಅವರು ಸದೃಢತೆ ಮತ್ತು ಶ್ರೇಷ್ಠತೆಗೆ ಮತ್ತೊಂದು ಹೆಸರಾಗಿದ್ದಾರೆ. ಬೆಳ್ಳಿ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಈ ಸಾಧನೆ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. @189thangavelu #Paralympics #Praise4Para" ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1750849) ವಿಸಿಟರ್ ಕೌಂಟರ್ : 183
ಪ್ರಕಟಣೆಯನ್ನು ಇದರಲ್ಲಿ ಓದಿ: English , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam