ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ನಲ್ಲಿ ಕಂಚಿನ ಪದಕ ಗೆದ್ದ ಶರದ್ ಕುಮಾರ್ ಅವರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 31 AUG 2021 6:06PM by PIB Bengaluru

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶರದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ," ಅದಮ್ಯ ಶರದ್‌ ಕುಮಾರ್‌ @sharad_kumar01 ಅವರು ಕಂಚಿನ ಪದಕ ಗೆಲ್ಲುವ ಮೂಲಕ ಪ್ರತಿಯೊಬ್ಬ ಭಾರತೀಯನ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಅವರ ಜೀವನದ ಪ್ರಯಾಣವು ಅನೇಕರಿಗೆ ಪ್ರೇರಣೆಯಾಗಿದೆ. ಅವರಿಗೆ ಅಭಿನಂದನೆಗಳು. #Paralympics #Praise4Para" ಎಂದಿದ್ದಾರೆ.

***


(रिलीज़ आईडी: 1750850) आगंतुक पटल : 208
इस विज्ञप्ति को इन भाषाओं में पढ़ें: Marathi , English , Urdu , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam