ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚು ಪದಕ ಗೆದ್ದ ಆರ್ಚರಿ ಕ್ರೀಡಾಪಟು ಹರ್ವಿಂದರ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

Posted On: 03 SEP 2021 6:33PM by PIB Bengaluru

ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚು ಗೆದ್ದ ಆರ್ಚರಿ ಆಟಗಾರ ಹರ್ವಿಂದರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು, “ಆರ್ಚರಿ ಆಟಗಾರ ಹರ್ವಿಂದರ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.  ಅವರು ದೃಢ ನಿರ್ಧಾರದಿಂದ ಆಟ ಆಡಿದರು. ಉತ್ತಮ ಕೌಶಲ್ಯ ಪ್ರದರ್ಶಿಸಿದ್ದರಿಂದ ಪದಕ ಗೆಲ್ಲಲು ಕಾರಣವಾಯಿತು. ಐತಿಹಾಸಿಕ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಬಗ್ಗೆ ನಮಗೆ ಹೆಮ್ಮೆ ಇದೆ. ಭವಿಷ್ಯದಲ್ಲಿ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ. #Paralympics #Praise4Paraಗೆ ಪ್ರಶಂಸೆ" ಎಂದು ಹೇಳಿದ್ದಾರೆ.

***



(Release ID: 1751807) Visitor Counter : 163