ಪ್ರಧಾನ ಮಂತ್ರಿಯವರ ಕಛೇರಿ
ಶಿಕ್ಷಕರ ದಿನದ ಅಂಗವಾಗಿ ಶಿಕ್ಷಕರ ಸಮುದಾಯಕ್ಕೆ ಪ್ರಧಾನಿ ಶುಭಾಶಯ
ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಕೆ
Posted On:
05 SEP 2021 9:16AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶಿಕ್ಷಕರ ಸಮುದಾಯಕ್ಕೆ ಶುಭ ಕೋರಿದ್ದಾರೆ. ಮಾಜಿ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಪ್ರಧಾನಮಂತ್ರಿಯವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಹೀಗೆ ಸರಣಿ ಟ್ವೀಟ್ ಮಾಡಿದ್ದಾರೆ: "ಶಿಕ್ಷಕರ ದಿನದಂದು, ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಸದಾ ಪ್ರಮುಖ ಪಾತ್ರ ವಹಿಸಿರುವ ಇಡೀ ಬೋಧಕ ಸಮುದಾಯಕ್ಕೆ ಶುಭಾಶಯಗಳು. ಕೋವಿಡ್-19 ಸಮಯದಲ್ಲೂ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣವನ್ನು ಶಿಕ್ಷಕರು ಆವಿಷ್ಕರಿಸಿದ ಮತ್ತು ಮುಂದುವರಿಸಿದ ಬಗೆ ಪ್ರಶಂಸನೀಯ.
ಡಾ. ಎಸ್. ರಾಧಾಕೃಷ್ಣನ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ವಿಶಿಷ್ಟ ಪಾಂಡಿತ್ಯ ಮತ್ತು ನಮ್ಮ ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುತ್ತೇನೆ."
***
(Release ID: 1752232)
Visitor Counter : 289
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam