ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಕೃಷ್ಣ ನಾಗರ್ ಅರವನ್ನು  ಅಭಿನಂದಿಸಿದ ಪ್ರಧಾನಿ

Posted On: 05 SEP 2021 10:20AM by PIB Bengaluru

ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದ ಕೃಷ್ಣ ನಾಗರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಟ್ವೀಟ್ ನಲ್ಲಿ, ಪ್ರಧಾನಿ ಹೀಗೆ ಹೇಳಿದ್ದಾರೆ: "ಟೋಕಿಯೊ #ಪ್ಯಾರಾಲಿಂಪಿಕ್ಸ್‌ನಲ್ಲಿ ನಮ್ಮ ಬ್ಯಾಡ್ಮಿಂಟನ್ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ನೋಡಿ ಸಂತೋಷವಾಗಿದೆ. @ಕೃಷ್ಣ ನಾಗರ್99 ಅವರ ಮಹೋನ್ನತ ಸಾಧನೆಯು ಪ್ರತಿಯೊಬ್ಬ ಭಾರತೀಯನ ಮುಖದಲ್ಲಿ ನಗು ತರಿಸಿದೆ. ಚಿನ್ನದ ಪದಕ ಗೆದ್ದ ಅವರಿಗೆ ಅಭಿನಂದನೆಗಳು."

***


(Release ID: 1752258) Visitor Counter : 242