ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ
azadi ka amrit mahotsav

ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ಸುಧಾರಣೆಗಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಿಂದ ಕಾರ್ಯಪಡೆ ರಚನೆ

Posted On: 08 SEP 2021 11:27AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ (ಎಂಇಐಟಿವೈ) ರಾಜ್ಯ ಸಚಿವ ಶ್ರೀ ರಾಜೀವ್ ಚಂದ್ರಶೇಖರ್ ಇತ್ತೀಚೆಗೆ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದ ವೇಳೆ ಪ್ರತಿಯೊಂದು ಜಿಲ್ಲೆಗಳಲ್ಲೂ ಕೆಲವು ಭಾಗಗಳಲ್ಲಿ ಅಂತರ್ಜಾಲ ಸಂಪರ್ಕ ಲಭ್ಯತೆ ಮತ್ತು ವೇಗದ ಸುಧಾರಣೆಗೆ ಹಲವಾರು ಮನವಿಗಳನ್ನು ಸ್ವೀಕರಿಸಲಾಯಿತು. ಪ್ರತಿಯೊಂದು ಜಿಲ್ಲೆಗಳಲ್ಲೂ (ಎಂಇಐಟಿವೈ) ಆ ಬಗ್ಗೆ ಅಧ್ಯಯನ ನಡೆಸಲು ಎಂಇಐಟಿವೈ ಕಾರ್ಯಪಡೆಯನ್ನು ಕಳುಹಿಸುವುದಾಗಿ ಸಚಿವರು ಭರವಸೆ ನೀಡಿದ್ದರು.

ಈ ಬದ್ಧತೆಗೆ ಪ್ರತಿಕ್ರಿಯೆಯಾಗಿ, ತಕ್ಷಣವೇ ಭೇಟಿ ಮಾಡಿ ಕಾರ್ಯಾರಂಭ ಮಾಡಲು ಅನುಕೂಲವಾಗುವಂತೆ ರಾಷ್ಟ್ರೀಯ ಇಂಟರ್ನೆಟ್ ಎಕ್ಸಚೇಂಜ್ ಆಫ್ ಇಂಡಿಯಾ (ಎನ್ ಐಎಕ್ಸ್ ಐ) ಮತ್ತು ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್ ಟಿಪಿಐ) ಪ್ರತಿನಿಧಿಗಳನ್ನು ಒಳಗೊಂಡ ಎಂಇಐಟಿವೈ ಕಾರ್ಯಪಡೆಯನ್ನು ರಚನೆ ಮಾಡಲಾಗಿದೆ. ಕಾರ್ಯಪಡೆಯ ಪ್ರತಿನಿಧಿಗಳು ಪ್ರತಿ ಜಿಲ್ಲೆಗೂ ಭೇಟಿ ನೀಡುವರು ಮತ್ತು ಜನರನ್ನು ಭೇಟಿ ಮಾಡಿ ಸಮಸ್ಯೆ ಆಲಿಸುವರು. ಅವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನೂ ಸಹ ಭೇಟಿ ಮಾಡಿ ಸಮಾಲೋಚನೆ ನಡೆಸುವರು ಮತ್ತು ಸಚಿವರಿಗೆ ವರದಿಯನ್ನು ಸಲ್ಲಿಸುವರು.

ಎಲ್ಲ ಭಾರತೀಯರನ್ನು ಸಂಪರ್ಕಿಸುವುದು ಮತ್ತು ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರಿಗೂ ನೇರವಾಗಿ ದೊರಕಿಸಿಕೊಡಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರದ  ಆದ್ಯತೆಗಳಲ್ಲಿ ಒಂದಾಗಿದೆ. 

https://static.pib.gov.in/WriteReadData/userfiles/image/image0011GFV.jpg

https://static.pib.gov.in/WriteReadData/userfiles/image/image002XVUD.jpg

***


(Release ID: 1753104) Visitor Counter : 312