ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ
azadi ka amrit mahotsav

`ಇ-ಶ್ರಮ್‘ ಪೋರ್ಟಲ್ ಪ್ರಾರಂಭವಾದಾಗಿನಿಂದ 27 ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ


ಅಸಂಘಟಿತ ಕಾರ್ಮಿಕರನ್ನು ಪೋರ್ಟಲ್‌ನಲ್ಲಿ ನೋಂದಾಯಿಸಲು ಭಾರತ ಸರಕಾರವು ಎಲ್ಲಾ ರಾಜ್ಯ ಸರಕಾರಗಳು ಮತ್ತು ಇತರ ಪಾಲುದಾರರಿಗೆ ಸಕ್ರಿಯ ಸಹಕಾರ ನೀಡುತ್ತಿದೆ ಮತ್ತು ಸಹಾಯ ಮಾಡುತ್ತಿದೆ: ಶ್ರೀ  ರಾಮೇಶ್ವರ  ತೇಲಿ

Posted On: 09 SEP 2021 2:05PM by PIB Bengaluru

ʻ-ಶ್ರಮ್‌ʼ  ಪೋರ್ಟಲ್ ನಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿಗಾಗಿ ಕಾರ್ಮಿಕ ಕಲ್ಯಾಣ ಮತ್ತು ಉದ್ಯೋಗ ಸಚಿವಾಲಯವು ವಿವಿಧ ಶಿಬಿರಗಳನ್ನು ಆಯೋಜಿಸುತ್ತಿದೆ.

ಇಂತಹ ಒಂದು ಶಿಬಿರವನ್ನು ನವದೆಹಲಿಯ ʻಶ್ರಮ ಶಕ್ತಿ ಭವನʼದಲ್ಲಿ ಇಂದು ಆಯೋಜಿಸಲಾಗಿತ್ತು. ಕಟ್ಟಡದಲ್ಲಿರುವ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಶಿಬಿರ ಆಯೋಜಿಸಲಾಗಿದ್ದು, ಶಿಬಿರದಲ್ಲಿ 80ಕ್ಕೂ ಹೆಚ್ಚು ಕಾರ್ಮಿಕರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ನಿರೀಕ್ಷೆಯಿದೆ.

NKP_0187.JPG

ಶಿಬಿರವನ್ನು ಉದ್ಘಾಟಿಸಿದ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಹಾಯಕ ಸಚಿವ ಶ್ರೀ ರಾಮೇಶ್ವರ ತೇಲಿ ಅವರು, ಪೋರ್ಟಲ್‌ ಬಗ್ಗೆ ಮತ್ತು ಅದರಲ್ಲಿ ನೋಂದಾಯಿಸಿಕೊಳ್ಳುವುದರಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವಂತೆ ಪ್ರತಿಯೊಬ್ಬರನ್ನೂ ಕೋರಿದರು.

NKP_0144.JPG

ಎಲ್ಲಾ ಅಸಂಘಟಿತ ಕಾರ್ಮಿಕರ ಮಾಹಿತಿ ಒಳಗೊಂಡ ರಾಷ್ಟ್ರೀಯ ದತ್ತಾಂಶ ಭಂಡಾರವನ್ನು ಅನ್ನು ರಚಿಸುವುದರಿಂದ ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳನ್ನು ಉದ್ದೇಶಿತರು ಮತ್ತು ತಳಮಟ್ಟದವರೆಗೂ ತಲುಪಿಸುವ ಬಗ್ಗೆ ಗಮನ ಹರಿಸಲು ಸರಕಾರಕ್ಕೆ ಸಹಾಯಕವಾಗಲಿದೆ ಎಂದು ಸಚಿವರು ಹೇಳಿದರು.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಿರ್ದೇಶನದಲ್ಲಿ ಕಳೆದ ತಿಂಗಳು ಪ್ರಾರಂಭಿಸಲಾದ ʻ-ಶ್ರಮ್ʼ ಪೋರ್ಟಲ್‌ ಅನ್ನು (shorturl.at/fxLU2) ಕ್ರಾಂತಿಕಾರಿ ಎಂದು ಬಣ್ಣಿಸಿದ ಶ್ರೀ ತೇಲಿ ಅವರುಆರಂಭದಿಂದ ಇಲ್ಲಿಯವರೆಗೂ ಈಗಾಗಲೇ 27 ಲಕ್ಷಕ್ಕೂ ಹೆಚ್ಚು  ಅಸಂಘಟಿತ  ಕಾರ್ಮಿಕರು ನೋಂದಾಯಿಸಿಕೊಂಡಿದ್ದಾರೆ ಎಂದರು. ಪೋರ್ಟಲ್‌ನಲ್ಲಿ ಕಾರ್ಮಿಕರನ್ನು ನೋಂದಾಯಿಸಲು ಭಾರತ ಸರಕಾರ ಎಲ್ಲಾ ರಾಜ್ಯ ಸರಕಾರಗಳು ಮತ್ತು ಇತರ ಪಾಲುದಾರರೊಂದಿಗೆ ಸಕ್ರಿಯವಾಗಿ ಸಹಕರಿಸುತ್ತಿದೆ ಎಂದು ಮಾಹಿತಿ ನೀಡಿದರು.

NKP_0162.JPG

ಪೋರ್ಟ್‌ಲ್‌ನಿಂದ ದೊರೆಯುವ ಪ್ರಯೋಜನಗಳನ್ನು ಪಟ್ಟಿ ಮಾಡಿದ ರಾಜ್ಯ ಸಚಿವರು, ಪೋರ್ಟ್‌ಲ್‌ನಲ್ಲಿ ನೋಂದಾಯಿಸಿಕೊಂಡವರಿಗೆ 2 ಲಕ್ಷ ರೂ.ಗಳ ಅಪಘಾತ ವಿಮೆ ದೊರೆಯಲಿದೆ ಎಂದು ಮಾಹಿತಿ ನೀಡಿದರು. ʻ-ಶ್ರಮ್‌ʼ ಪೋರ್ಟಲ್‌ನಲ್ಲಿ ನೋಂದಣಿಯಾದ ಯಾವುದೇ ಕಾರ್ಮಿಕ ಅಪಘಾತಕ್ಕೀಡಾದರೆ, ಅವರು ಸಾವು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ 2 ಲಕ್ಷ ರೂ. ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ರೂ. ವಿಮಾ ಪರಿಹಾರಕ್ಕೆ ಅರ್ಹರಾಗಿರುತ್ತಾರೆ. ಜೊತೆಗೆ ನೋಂದಣಿಯ ನಂತರ ಕಾರ್ಮಿಕರಿಗೆ ಸಾರ್ವತ್ರಿಕ ಖಾತೆ ಸಂಖ್ಯೆಯನ್ನು (ಯುಎಎನ್‌) ಒದಗಿಸಲಾಗುತ್ತದೆ. ಇದು ವಿಶೇಷವಾಗಿ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳು, ಪಡಿತರ ಚೀಟಿಗಳು ಇತ್ಯಾದಿಗಳನ್ನು ಒಂದೆಡೆಯಿಂದ ಮತ್ತೊಂದೆಡೆಗೆ ವರ್ಗಾಯಿಸುವ ಕೆಲಸವನ್ನು(ಪೋರ್ಟಬಿಲಿಟಿ) ಸುಲಭಗೊಳಿಸುತ್ತದೆ ಎಂದರು.

***


(Release ID: 1753485) Visitor Counter : 255