ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 13 SEP 2021 2:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರ ಪಟೇಲ್ ಅವರನ್ನು ಅಭಿನಂದಿಸಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರನ್ನೂ ಶ್ಲಾಘಿಸಿರುವ ಪ್ರಧಾನಿ ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ರೂಪಾನಿ ಅನೇಕ ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದ್ದರು. ಸಮಾಜದ ಎಲ್ಲ ವರ್ಗಕ್ಕೂ ಅವಿರತವಾಗಿ ಶ್ರಮಿಸಿದ್ದರು ಎಂದು ಹೇಳಿದ್ದಾರೆ.

ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, "ಗುಜರಾತ್‌ನ ಮುಖ್ಯಮಂತ್ರಿಯಾಗಿ  ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಭಾಯ್ ಅವರಿಗೆ ಅಭಿನಂದನೆಗಳು. ನಾನು ಅವರನ್ನು ಹಲವು ವರ್ಷಗಳಿಂದ ಬಲ್ಲೆ. ಅದು ಬಿಜೆಪಿ ಸಂಘಟನೆಯಲ್ಲಿರಲಿ ಅಥವಾ ನಾಗರಿಕ ಆಡಳಿತದಲ್ಲಿರಲಿ ಅಥವಾ ಸಮುದಾಯ ಸೇವೆಯಲ್ಲಿರಲಿ ಅವರ ಅನುಕರಣೀಯ ಕೆಲಸವನ್ನು ನೋಡಿದ್ದೇನೆ. ಅವರು ಖಂಡಿತವಾಗಿಯೂ ಗುಜರಾತ್‌ನ ಬೆಳವಣಿಗೆಯ ಪಥವನ್ನು ಶ್ರೀಮಂತಗೊಳಿಸುತ್ತಾರೆ. @Bhupendrapbjp.”

ಸಿಎಂ ಆಗಿದ್ದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ರೂಪಾನಿ ಜೀ ಅವರು ಅನೇಕ ಜನಸ್ನೇಹಿ ಕ್ರಮಗಳನ್ನು ಕೈಗೊಂಡಿದ್ದಾರೆ. ಸಮಾಜದ ಎಲ್ಲ ವರ್ಗಕ್ಕೂ ಅವಿರತವಾಗಿ ಶ್ರಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಾರ್ವಜನಿಕ ಸೇವೆಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ, @vijayrupanibjp” ಎಂದಿದ್ದಾರೆ.

***(Release ID: 1754531) Visitor Counter : 186