ಪ್ರಧಾನ ಮಂತ್ರಿಯವರ ಕಛೇರಿ

ಸೆಪ್ಟೆಂಬರ್ 16ರಂದು ಕಸ್ತೂರಬಾ ಗಾಂಧಿ ಮಾರ್ಗ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಲಿರುವ ಪ್ರಧಾನಿ

Posted On: 15 SEP 2021 2:36PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ಸೆಪ್ಟೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಕಸ್ತೂರಬಾ ಗಾಂಧಿ ಮಾರ್ಗ್ ಮತ್ತು ಆಫ್ರಿಕಾ ಅವೆನ್ಯೂನಲ್ಲಿ ರಕ್ಷಣಾ ಕಚೇರಿಗಳ ಸಂಕೀರ್ಣಗಳನ್ನು ಉದ್ಘಾಟಿಸಲಿದ್ದಾರೆ. ಆಫ್ರಿಕಾ ಅವೆನ್ಯೂನಲ್ಲಿರುವ ರಕ್ಷಣಾ ಕಚೇರಿ ಸಂಕೀರ್ಣಕ್ಕೆ ಭೇಟಿ ನೀಡಲಿರುವ ಅವರು ಅಲ್ಲಿ ಸೇನೆ, ನೌಕಾಪಡೆ, ವಾಯುಪಡೆ ಮತ್ತು ನಾಗರಿಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಅವರು ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಹೊಸ ರಕ್ಷಣಾ ಕಚೇರಿ ಸಂಕೀರ್ಣಗಳ ಬಗ್ಗೆ

ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣಗಳು ಸೇನೆ, ನೌಕಾಪಡೆ ಮತ್ತು ವಾಯುಪಡೆ ಸೇರಿದಂತೆ ರಕ್ಷಣಾ ಸಚಿವಾಲಯ ಮತ್ತು ಸಶಸ್ತ್ರ ಪಡೆಗಳ ಸುಮಾರು 7,000 ಅಧಿಕಾರಿಗಳಿಗೆ ಸ್ಥಳಾವಕಾಶ ಕಲ್ಪಿಸಲಿವೆ. ಕಟ್ಟಡಗಳು ಆಧುನಿಕ, ಸುರಕ್ಷಿತ ಮತ್ತು ಕ್ರಿಯಾತ್ಮಕ ಕೆಲಸದ ಸ್ಥಳಗಳನ್ನು ಒದಗಿಸುತ್ತವೆ. ಕಟ್ಟಡದಲ್ಲಿ ಕಾರ್ಯಕಲಾಪಗಳನ್ನು ನಿರ್ವಹಿಸಲು ಸಮಗ್ರ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದು ಎರಡೂ ಕಟ್ಟಡಗಳ ಸುರಕ್ಷತೆ ಮತ್ತು ಕಣ್ಗಾವಲು ವ್ಯವಸ್ಥೆಯನ್ನು ಪೂರೈಸುತ್ತದೆ.

ಹೊಸ ರಕ್ಷಣಾ ಕಚೇರಿ ಸಂಕೀರ್ಣಗಳು ಸಮಗ್ರ ಭದ್ರತಾ ನಿರ್ವಹಣಾ ಕ್ರಮಗಳೊಂದಿಗೆ ಅತ್ಯಾಧುನಿಕವಾಗಿದ್ದು, ಇಂಧನ ದಕ್ಷತೆಯನ್ನು ಹೊಂದಿವೆʻಎಲ್‌ಜಿಎಸ್‌ಎಫ್ʼ (ಲೈಟ್ ಗೇಜ್ ಸ್ಟೀಲ್ ಫ್ರೇಮ್) ಎಂದು ಕರೆಯಲಾಗುವ ಹೊಸ ಮತ್ತು ಸುಸ್ಥಿರ ನಿರ್ಮಾಣ ತಂತ್ರಜ್ಞಾನವನ್ನು ಬಳಸಿರುವುದು ಕಟ್ಟಡಗಳ ವಿಶೇಷ ಲಕ್ಷಣಗಳಲ್ಲಿ ಒಂದಾಗಿದೆ. ತಂತ್ರಜ್ಞಾನ ಬಳಕೆಯಿಂದ ಸಾಂಪ್ರದಾಯಿಕ ಆರ್‌ಸಿಸಿ ನಿರ್ಮಾಣಕ್ಕೆ ಹೋಲಿಸಿದರೆ, ಕಟ್ಟಡ ನಿರ್ಮಾಣ ಸಮಯವು 24-30 ತಿಂಗಳಷ್ಟು ಕಡಿಮೆಯಾಗಿದೆ. ಕಟ್ಟಡಗಳು ಸಂಪನ್ಮೂಲ ದಕ್ಷ ಹಸಿರು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳನ್ನು ಉತ್ತೇಜಿಸುತ್ತದೆ.

ಉದ್ಘಾಟನಾ ಸಮಾರಂಭದಲ್ಲಿ ರಕ್ಷಣಾ ಸಚಿವರು, ವಸತಿ ಮತ್ತು ನಗರ ವ್ಯವಹಾರಗಳ ಸಚಿವರು, ರಕ್ಷಣಾ ಖಾತೆ ಸಹಾಯಕ ಸಚಿವರು, ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಮತ್ತು ಸಶಸ್ತ್ರ ಪಡೆಗಳ ಮುಖ್ಯಸ್ಥರು ಭಾಗವಹಿಸಲಿದ್ದಾರೆ.

***



(Release ID: 1755055) Visitor Counter : 173