ಪ್ರಧಾನ ಮಂತ್ರಿಯವರ ಕಛೇರಿ

ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ಜನರಿಗೆ ಪ್ರಧಾನಮಂತ್ರಿ ಕರೆ

Posted On: 19 SEP 2021 9:46AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಉಡುಗೊರೆ ಮತ್ತು ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಆ ಹರಾಜಿನಿಂದ ಬಂದ ಹಣವನ್ನು ನಮಾಮಿ ಗಂಗಾ ಉಪಕ್ರಮಕ್ಕೆ ಬಳಸಲಾಗುವುದು ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಹಲವು ದಿನಗಳಿಂದ ತಾವು ಸ್ವೀಕರಿಸಲಾದ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಹರಾಜಿಗಿಡಲಾಗಿದೆ. ಇದರಲ್ಲಿ ನಮ್ಮ ಒಲಿಂಪಿಯನ್ ಹಿರೋಗಳು ನೀಡಿದ ವಿಶೇಷ ಸ್ಮರಣಿಕೆಗಳೂ ಸಹ ಸೇರಿವೆ. ಈ ಹರಾಜಿನಲ್ಲಿ ಪಾಲ್ಗೊಳ್ಳಿ.  ಆವುಗಳ ಹರಾಜಿನಿಂದ ಬಂದ ಹಣವನ್ನು ನಮಾಮಿ ಗಂಗಾ ಯೋಜನೆಗೆ ಬಳಕೆ ಮಾಡಲಾಗುವುದು’’ ಎಂದು ಹೇಳಿದ್ದಾರೆ.

 


 

***(Release ID: 1756231) Visitor Counter : 87