ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ನಡುವಿನ ಸಭೆ
Posted On:
24 SEP 2021 3:12AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಮ್ಮ ಅಮೆರಿಕಾ ಪ್ರವಾಸದ ವೇಳೆ 2021ರ ಸೆಪ್ಟಂಬರ್ 23ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾದ ಗೌರವಾನ್ವಿತ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರನ್ನು ಭೇಟಿ ಮಾಡಿದರು.
ಮೊದಲ ಮುಖಾಮುಖಿ ಭೇಟಿಗಾಗಿ ಉಭಯ ನಾಯಕರು ಸಂತಸ ವ್ಯಕ್ತಪಡಿಸಿದರು. ಅವರು 2021ರ ಜೂನ್ ತಿಂಗಳಲ್ಲಿ ನಡೆಸಿದ ದೂರವಾಣಿ ಸಮಾಲೋಚನೆಯನ್ನು ನೆನೆಪಿಸಿಕೊಂಡರು. ಆಫ್ಘಾನಿಸ್ತಾನ ಸೇರಿದಂತೆ ಇತ್ತೀಚಿನ ಜಾಗತಿಕ ಬೆಳವಣಿಗೆಗಳ ಕುರಿತು ಉಭಯ ನಾಯಕರು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಮುಕ್ತ, ಸಮಗ್ರ ಮತ್ತು ಎಲ್ಲವನ್ನೂ ಒಳಗೊಂಡ ಇಂಡೋ-ಪೆಸಿಫಿಕ್ ಪ್ರದೇಶ ಸ್ಥಾಪನೆಯತ್ತ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಅಲ್ಲದೆ, ಇಬ್ಬರೂ ನಾಯಕರು ತಮ್ಮ ತಮ್ಮ ರಾಷ್ಟ್ರಗಳಲ್ಲಿನ ಕೋವಿಡ್-19 ಸ್ಥಿತಿಗತಿ, ಲಸಿಕೆ ನೀಡಿಕೆಯನ್ನು ತೀವ್ರಗೊಳಿಸುವ ಮೂಲಕ ಸಾಂಕ್ರಾಮಿಕವನ್ನು ನಿಯಂತ್ರಿಸಲು ಕೈಗೊಂಡಿರುವ ಪ್ರಯತ್ನಗಳು ಮತ್ತು ಗಂಭೀರ ವೈದ್ಯಕೀಯ ಸಾಧನಗಳು, ಚಿಕಿತ್ಸೆ ಮತ್ತು ಆರೋಗ್ಯ ರಕ್ಷಣಾ ಸಾಧನಗಳ ಪೂರೈಕೆ ಖಾತ್ರಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಹವಾಮಾನ ವೈಪರೀತ್ಯ ತಡೆಗೆ ಸಹಭಾಗಿತ್ವದ ಕ್ರಮದ ಪ್ರಾಮುಖ್ಯವನ್ನು ಉಭಯ ದೇಶಗಳು ಒಪ್ಪಿಕೊಂಡವು. ಪ್ರಧಾನಮಂತ್ರಿ ಅವರು ಭಾರತ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಹೆಚ್ಚಳಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದು ಮತ್ತು ಇತ್ತೀಚೆಗೆ ಆರಂಭಿಸಿರುವ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಕುರಿತು ಮಾತನಾಡಿದರು. ಅಲ್ಲದೆ, ಅವರು ಪರಿಸರ ಸುಸ್ಥಿರತೆಯನ್ನು ಉತ್ತೇಜಿಸಲು ಜೀವನಶೈಲಿ ಬದಲಾವಣೆಗೆ ಒತ್ತು ನೀಡುವ ಅಗತ್ಯತೆಯನ್ನು ಪ್ರತಿಪಾದಿಸಿದರು.
ಬಾಹ್ಯಾಕಾಶ ಸಹಕಾರ, ಮಾಹಿತಿ ತಂತ್ರಜ್ಞಾನ ವಿಶೇಷವಾಗಿ ಉದಯೋನ್ಮುಖ ಮತ್ತು ನಿರ್ಣಾಯಕ ತಂತ್ರಜ್ಞಾನಗಳು, ಜೊತೆಗೆ ಆರೋಗ್ಯ ಕ್ಷೇತ್ರದಲ್ಲಿ ಸಹಕಾರ ಸೇರಿದಂತೆ ಭವಿಷ್ಯದ ಸಹಭಾಗಿತ್ವದ ಕ್ಷೇತ್ರಗಳ ಕುರಿತು ಅವರು ಚರ್ಚೆ ನಡೆಸಿದರು. ಉತ್ಸಾಹ ಭರಿತ ಜನರಿಂದ ಜನರು ನಡುವಿನ ಸಂಪರ್ಕ ಪರಸ್ಪರ ಶಿಕ್ಷಣ ಸಂಬಂಧಗಳಿಗೆ ಪ್ರಯೋಜನಕಾರಿ ಮತ್ತು ಎರಡೂ ದೇಶಗಳ ನಡುವೆ ಜ್ಞಾನ, ಹೊಸತನದ ಶೋಧ ಮತ್ತು ಪ್ರತಿಭೆಯ ಹರಿವಿಗೆ ಸಹಕಾರಿ ಎಂಬುದನ್ನು ಉಭಯ ನಾಯಕರು ಒಪ್ಪಿಕೊಂಡರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಮತ್ತು ಸೆಕೆಂಡ್ ಜಂಟಲ್ಮನ್ ಡೌಗ್ಲಾಸ್ ಎಮಾಫ್ ಅವರಿಗೆ ಶೀಘ್ರವೇ ಭಾರತ ಭೇಟಿ ಕೈಗೊಳ್ಳಬೇಕೆಂದು ಆಹ್ವಾನ ನೀಡಿದರು.
***
(Release ID: 1757558)
Visitor Counter : 279
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam