ಪ್ರಧಾನ ಮಂತ್ರಿಯವರ ಕಛೇರಿ

ಸೆಪ್ಟಂಬರ್ 27ರಂದು ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ ಗೆ ಚಾಲನೆ ನೀಡಲಿರುವ ಪ್ರಧಾನಿ


ಪಿಎಂ-ಡಿಎಚ್ ಎಂ ತಡೆ ರಹಿತ ಆನ್ ಲೈನ್ ವೇದಿಕೆ ಒದಗಿಸುತ್ತದೆ; ಇದರಿಂದ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯೊಳಗೆ ಪರಸ್ಪರ ಕಾರ್ಯಸಾಧ್ಯತೆ ಸಕ್ರಿಯ

Posted On: 26 SEP 2021 2:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಸೆಪ್ಟಂಬರ್ 27ರಂದು ಬೆಳಿಗ್ಗೆ 11 ಗಂಟೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್ ಎಂ) ಗೆ ಚಾಲನೆ ನೀಡಲಿದ್ದಾರೆ. ಆನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

2020ರ ಆಗಸ್ಟ್ 15ರಂದು ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಅವರು ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಯೋಜನೆಯ ಪ್ರಾಯೋಗಿಕ ಯೋಜನೆಯನ್ನು ಪ್ರಕಟಿಸಿದ್ದರು. ಸದ್ಯ ಈ ಪಿಎಂ-ಡಿಎಚ್ ಎಂ ಯೋಜನೆಯನ್ನು ಆರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ.

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ)ನ ಮೂರನೇ ವಾರ್ಷಿಕೋತ್ಸವದೊಂದಿಗೆ ಪಿಎಂ-ಡಿಎಚ್ ಎಂ ದೇಶಾದ್ಯಂತ ಜಾರಿಗೊಳಿಸುವುದಕ್ಕೆ ಚಾಲನೆ ನೀಡಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಪ್ರಧಾನಮಂತ್ರಿ ಡಿಜಿಟಲ್ ಆರೋಗ್ಯ ಮಿಷನ್ (ಪಿಎಂ-ಡಿಎಚ್ ಎಂ) ಕುರಿತು

ಜನ ಧನ್, ಆಧಾರ್ ಮತ್ತು ಮೊಬೈಲ್ (ಜಾಮ್) ತ್ರಿಮೂರ್ತಿಗಳು ಮತ್ತು ಸರ್ಕಾರದ ಇತರೆ ಡಿಜಿಟಲ್ ಉಪಕ್ರಮಗಳ ಅಡಿಪಾಯದ ಆಧಾರದ ಮೇಲೆ, ಪಿಎಂ-ಡಿಎಚ್ ಎಂ ವ್ಯಾಪಕ ಶ್ರೇಣಿಯ ದತ್ತಾಂಶ ಮತ್ತು ಮಾಹಿತಿ ಒದಗಿಸುವ ಮೂಲಕ ತಡೆರಹಿತ ಆನ್ ಲೈನ್ ವೇದಿಕೆಯನ್ನು ಒದಗಿಸಲಿದೆ. ಜೊತೆಗೆ ಮಾಹಿತಿ ಹಾಗೂ ಮೂಲಸೌಕರ್ಯ ಸೇವೆಗಳು, ಆರೋಗ್ಯಕ್ಕೆ ಸಂಬಂಧಿಸಿದ ವೈಯಕ್ತಿಕ ಮಾಹಿತಿಯ ರಕ್ಷಣೆ, ಗೋಪ್ಯತೆ ಮತ್ತು ಗೋಪ್ಯತೆಯನ್ನು ಖಾತ್ರಿಪಡಿಸುವ ಮೂಲಕ ಮುಕ್ತ, ಪರಸ್ಪರ ಕಾರ್ಯನಿರ್ವಹಿಸುವ ಮಾನದಂಡ ಆಧಾರಿತ ಡಿಜಿಟಲ್ ವ್ಯವಸ್ಥೆಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗಲಿದೆ. ಈ ಮಿಷನ್ ನಾಗರಿಕ ಒಪ್ಪಿಗೆಯೊಂದಿಗೆ ಆರೋಗ್ಯದ ದಾಖಲೆಗಳನ್ನು ಹೊಂದಲು ಮತ್ತು ವಿನಿಮಯವನ್ನು ಸಕ್ರಿಯಗೊಳಿಸಲಿದೆ.

ಪಿಎಚ್-ಡಿಎಚ್ ಎಂನ ಒಂದು ಪ್ರಮುಖ ಅಂಶವೆಂದರೆ, ಪ್ರತಿಯೊಬ್ಬ ನಾಗರಿಕನಿಗೂ ಒಂದು ಆರೋಗ್ಯ ಐಡಿಯನ್ನು ಒಳಗೊಂಡಿರುತ್ತದೆ. ಅದು ಅವರ ಆರೋಗ್ಯ ಖಾತೆಯಾಗಿಯೂ ಕಾರ್ಯನಿರ್ವಹಿಸಲಿದೆ. ಇದಕ್ಕೆ ವೈಯಕ್ತಿಕ ಆರೋಗ್ಯ ದಾಖಲೆಗಳನ್ನು ಸಂಯೋಜಿಸಬಹುದು ಮತ್ತು ಮೊಬೈಲ್ ಅಪ್ಲಿಕೇಷನ್ ಸಹಾಯದಿಂದ ನೋಡಬಹುದು. ಹೆಲ್ತ್ ಕೇರ್ ಪ್ರೊಫೆಷನಲ್ ರಿಜಿಸ್ಟ್ರಿ (ಎಚ್ ಪಿಆರ್) ಮತ್ತು  ಹೆಲ್ತ್ ಕೇರ್ ಫೆಸಿಲಿಟಿಸ್ ರಿಜಿಸ್ಟ್ರಿ (ಎಚ್ ಎಫ್ ಆರ್ ) ಆಧುನಿಕ ಮತ್ತು ಸಾಂಪ್ರದಾಯಿಕ ಔಷಧಿಗಳೆರಡರಲ್ಲೂ ಎಲ್ಲ ಆರೋಗ್ಯ ಸೇವಾ ಪೂರೈಕೆದಾರರ ಭಂಡಾರವಾಗಿ ಕಾರ್ಯನಿರ್ವಹಿಸಲಿದೆ. ಇದು ವೈದ್ಯರು/ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಪೂರೈಕೆದಾರರಿಗೆ ಸುಲಭವಾಗಿ ವ್ಯವಹಾರವನ್ನು ಖಚಿತಪಡಿಸುತ್ತದೆ.

ಮಿಷನ್ ನ ಒಂದು ಭಾಗವಾಗಿ ರಚಿಸಲಾಗಿರುವ ಪಿಎಂ-ಡಿಎಚ್ ಎಂ ಸ್ಯಾಂಡ್ ಬಾಕ್ಸ್, ತಂತ್ರಜ್ಞಾನ ಮತ್ತು ಉತ್ಪನ್ನ ಪರೀಕ್ಷೆಯ ಚೌಕಟ್ಟಾಗಿ ಕಾರ್ಯನಿರ್ವಹಿಸಲಿದೆ. ಇದು ಖಾಸಗಿ ಪಾಲುದಾರರು ಸೇರಿದಂತೆ ಎಲ್ಲ ಸಂಸ್ಥೆಗಳಿಗೂ ಸಹಾಯ ಮಾಡಲಿದೆ. ರಾಷ್ಟ್ರೀಯ ಡಿಜಿಟಲ್ ಆರೋಗ್ಯ ವ್ಯವಸ್ಥೆಯ ಭಾಗವಾಗಲು ಉದ್ದೇಶಿಸಿರುವ ಇದು ಆರೋಗ್ಯ ಮಾಹಿತಿ ಪೂರೈಕೆದಾರರು ಅಥವಾ ಆರೋಗ್ಯ ಮಾಹಿತಿ ಬಳಕೆದಾರರು ಅಥವಾ ಪಿಎಂ-ಡಿಎಚ್ ಎಂನ ಕಟ್ಟಡಗಳ ಸಮುಚ್ಛಯದೊಂದಿಗೆ ಪರಿಣಾಕಾರಿಯಾಗಿ ಲಿಂಕ್ ಮಾಡಲಾಗುವುದು.

ಈ  ಮಿಷನ್ ಪಾವತಿ ವ್ಯವಸ್ಥೆಯಲ್ಲಿ ಕ್ರಾಂತಿಯನ್ನುಂಟು ಮಾಡಿದ ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ ನಿರ್ವಹಿಸಿದ್ದ ಪಾತ್ರದಲ್ಲಿ ಇದು ಡಿಜಿಟಲ್ ಆರೋಗ್ಯ ಪೂರಕ ವ್ಯವಸ್ಥೆಯಲ್ಲಿ ಪರಸ್ಪರ ಕಾರ್ಯಸಾಧ್ಯತೆಯನ್ನು ಸೃಷ್ಟಿಸುತ್ತದೆ. ನಾಗಿರಕರು ಆರೋಗ್ಯ ರಕ್ಷಣಾ ಸೌಕರ್ಯವನ್ನು ಪಡೆಯಲು ಕೇವಲ ಒಂದು ಕ್ಲಿಕ್ ಮಾಡುವಷ್ಟು ದೂರದಲ್ಲಿರುತ್ತಾರೆ.

***



(Release ID: 1758303) Visitor Counter : 457