ಪ್ರಧಾನ ಮಂತ್ರಿಯವರ ಕಛೇರಿ
ಲತಾ ಮಂಗೇಶ್ಕರ್ ಅವರಿಗೆ ಪ್ರಧಾನಿಯಿಂದ ಜನ್ಮದಿನದ ಶುಭಾಶಯ
ಪ್ರಕಟಣಾ ದಿನಾಂಕ:
28 SEP 2021 11:01AM by PIB Bengaluru
ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ,
"ಗೌರವಾನ್ವಿತ ಲತಾ ದೀದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ಸುಮಧುರ ಕಂಠಸಿರಿ ಪ್ರಪಂಚದಾದ್ಯಂತ ಅನುರಣಿಸುತ್ತದೆ. ಅವರು ತಮ್ಮ ವಿನಮ್ರತೆ ಮತ್ತು ಭಾರತೀಯ ಸಂಸ್ಕೃತಿಯ ಬಗ್ಗೆ ಉತ್ಸಾಹಕ್ಕಾಗಿ ಗೌರವಿಸಲ್ಪಟ್ಟಿದ್ದಾರೆ. ವೈಯಕ್ತಿಕವಾಗಿ, ಅವರ ಆಶೀರ್ವಾದವು ಅಗಾಧ ಶಕ್ತಿಯ ಮೂಲವಾಗಿದೆ. ಲತಾ ದೀದಿ ಅವರ ಸುದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ,” ಎಂದಿದ್ದಾರೆ.
***
(ಪ್ರಕಟಣೆ ಐ.ಡಿ.: 1758850)
ವಿಸಿಟರ್ ಕೌಂಟರ್ : 269
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam