ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜ್ಯಸಭೆಗೆ ಆಯ್ಕೆಯಾದ ಸರ್ಬಾನಂದ ಸೋನೋವಾಲ್ ಮತ್ತು ಡಾ. ಎಲ್. ಮುರುಗನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 SEP 2021 11:22AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಚುನಾಯಿತವಾಗಿರುವ ತಮ್ಮ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಮತ್ತು ಡಾ. ‌ಎಲ್. ಮುರುಗನ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ "ಅಸ್ಸಾಂ ಮತ್ತು ಮಧ್ಯಪ್ರದೇಶದಿಂದ ಕ್ರಮವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಸಂಪುಟದ ಸಹೋದ್ಯೋಗಿಗಳಾದ ಶ್ರಿ ಸರ್ಬಾನಂದ ಸೋನೋವಾಲ್ ಮತ್ತು ಡಾ.ಎಲ್. ಮುರುಗನ್ ಅವರಿಗೆ ಅಭಿನಂದನೆಗಳು. ಇಬ್ಬರೂ ಸಂಸದೀಯ ಕಲಾಪಗಳನ್ನು ಉತ್ಕೃಷ್ಟ ಗೊಳಿಸಲಿದ್ದಾರೆ ಮತ್ತು ಸಾರ್ವಜನಿಕ ಒಳಿತಿನ ತಮ್ಮಕಾರ್ಯಸೂಚಿಯಂತೆ ನಡೆಯಲಿದ್ದಾರೆ ಎಂಬ ವಿಶ್ವಾಸ ನನಗಿದೆ" ಎಂದು ಹೇಳಿದ್ದಾರೆ.‌

***


(ಪ್ರಕಟಣೆ ಐ.ಡಿ.: 1758930) ವಿಸಿಟರ್ ಕೌಂಟರ್ : 322
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam