ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
ಕೋವಿಡ್-19 ಇಂದಿನ ಪರಿಷ್ಕೃತ ವರದಿ
प्रविष्टि तिथि:
30 SEP 2021 9:20AM by PIB Bengaluru
ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಇದುವರೆಗೆ 88.34 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.
ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 23,529 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಒಟ್ಟು ಕೊರೊನಾ ಪ್ರಕರಣಗಳ 1%ಗಿಂತ ಕಡಿಮೆ ಇದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಪ್ರಮಾಣ 0.82%ಗೆ ತಗ್ಗಿದೆ. 2020 ಮಾರ್ಚ್ ನಿಂದ ಕಂಡುಬಂದಿರುವ ಅತ್ಯಂತ ಕನಿಷಅಠ ಪ್ರಮಾಣ ಇದಾಗಿದೆ.
ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 2,77,020ಗೆ ಇಳಿಕೆ ಕಂಡಿದೆ. ಇದು ಕಳೆದ 195 ದಿನಗಳಲ್ಲಿ ಅತ್ಯಂತ ಕನಿಷ್ಠ.
ಕೊರೊನಾ ಸೋಂಕಿನ ಚೇತರಿಕೆ ದರ ಇದೀಗ 97.85%ಗೆ ಸುಧಾರಣೆ ಕಂಡಿದೆ. 2020 ಮಾರ್ಚ್ ನಿಂದ ಆಗಿರುವ ಅತ್ಯಂತ ಗರಿಷ್ಠ ಸುಧಾರಣೆ ಇದಾಗಿದೆ.
ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 28,718 ರೋಗಿಗಳು ಗುಣಮುಖರಾಗಿದ್ದಾರೆ. ಇದರೊಂದಿಗೆ, ದೇಶದಲ್ಲಿ ಕೊರೊನಾ ಕಾಣಿಸಿಕೊಂಡ ದಿನದಿಂದ ಇಲ್ಲಿಯ ತನಕ ಒಟ್ಟಾರೆ ಗುಣಮುಖರಾದವರ ಸಂಖ್ಯೆ3,30,14,898ಕ್ಕೆ ಏರಿಕೆ ಕಂಡಿದೆ.
ಸತತ 97 ದಿನಗಳಿಂದ ವಾರದ ಪಾಸಿಟಿವಿಟಿ ದರ 3% ಮಟ್ಟದಿಂದ ಕೆಳಗಿದ್ದು, ಅದೀಗ 1.74%ಗೆ ಇಳಿಕೆ ಕಂಡಿದೆ.
ದೈನಂದಿನ ಪಾಸಿಟಿವಿಟಿ ದರ ಸತತ 31 ದಿನಗಳಿಂದ 3% ಮಟ್ಟದಿಂದ ಕೆಳಕ್ಕೆ ಇಳಿದಿದ್ದು, ಅದೀಗ 1.56%ಗೆ ಕುಸಿದಿದೆ.
ದೇಶಾದ್ಯಂತ ಇದುವರೆಗೆ 56.89 ಕೋಟಿ ಜನರ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷೆ ನಡೆಸಲಾಗಿದೆ.
****
(रिलीज़ आईडी: 1759637)
आगंतुक पटल : 279
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam