ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಪಾನ್‌ನ  ನೂತನ ಪ್ರಧಾನಿಯಾಗಿ ಆಯ್ಕೆಯಾದ ಘನತೆವೆತ್ತ ಕಿಶಿದಾ ಫುಮಿಯೊ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಭಿನಂದನೆ

ಪ್ರಕಟಣಾ ದಿನಾಂಕ: 04 OCT 2021 4:43PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಿಯಾಗಿ ಆಯ್ಕೆಯಾದ ಘನತೆವೆತ್ತ ಕಿಶಿದಾ ಫುಮಿಯೊ ಅವರನ್ನು ಅಭಿನಂದಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಜಪಾನ್‌ನ ನೂತನ ಪ್ರಧಾನಿ ಘನತೆವೆತ್ತ ಕಿಶಿದಾ ಫುಮಿಯೊ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಭಾರತ-ಜಪಾನ್‌ ನಡುವೆ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ನಮ್ಮ ಪ್ರದೇಶ ಮತ್ತು ಅದರಾಚೆಗೆ ಶಾಂತಿ ಮತ್ತು ಸಮೃದ್ಧಿಯನ್ನು ಮುಂದುವರಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ." ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1760840) ವಿಸಿಟರ್ ಕೌಂಟರ್ : 389