ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕದಲ್ಲಿ ಮನೆ ಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ


ಸಂತ್ರಸ್ತರಿಗೆ ʻಪಿಎಂ ರಾಷ್ಟ್ರೀಯ ಪರಿಹಾರ ನಿಧಿʼಯಿಂದ ಪರಿಹಾರ ನೀಡಲು ಅನುಮೋದನೆ

प्रविष्टि तिथि: 07 OCT 2021 1:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿತದಿಂದ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಸಂತ್ರಸ್ತರಿಗೆ ಪರಿಹಾರ ಒದಗಿಸಲು ಪ್ರಧಾನಿ ಅನುಮೋದನೆ ನೀಡಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ:

"ಕರ್ನಾಟಕದ ಬೆಳಗಾವಿಯಲ್ಲಿ ಮನೆ ಕುಸಿತದಿಂದ ಉಂಟಾದ ಜೀವಹಾನಿ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ಶೋಖತಪ್ತ ಸಂಬಂಧಿಕರ ಬಗ್ಗೆ ನನ್ನ ಕಳಕಳಿ ವ್ಯಕ್ತಪಡಿಸಲು ಬಯಸುತ್ತೇನೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ @narendramodi".

***


(रिलीज़ आईडी: 1761729) आगंतुक पटल : 222
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam