ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜಪಾನಿನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಫುಮಿಯೊ ಕಿಶಿದಾ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ

ಪ್ರಕಟಣಾ ದಿನಾಂಕ: 08 OCT 2021 5:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘನತೆವೆತ್ತ ಫುಮಿಯೊ ಕಿಶಿದಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅಭಿನಂದಿಸಲು ಘನತೆವೆತ್ತ ಫುಮಿಯೊ ಕಿಶಿದಾ ಅವರಿಗೆ ಕರೆ ಮಾಡಿ ಮಾತನಾಡಿದೆ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಇಂಡೋ-ಪೆಸಿಫಿಕ್ ವಲಯದಲ್ಲಿ ಸಹಕಾರವನ್ನು ಹೆಚ್ಚಿಸಲು ಕಿಶಿದಾ ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ." ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1762290) ವಿಸಿಟರ್ ಕೌಂಟರ್ : 189
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam