ಪ್ರಧಾನ ಮಂತ್ರಿಯವರ ಕಛೇರಿ
ಜಪಾನ್ ಪ್ರಧಾನಿ ಘನತೆವೆತ್ತ ಫುಮಿಯೊ ಕಿಶಿದಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
08 OCT 2021 6:10PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೋ ಕಿಶಿದಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು.
ಜಪಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಘನತೆವೆತ್ತ ಕಿಶಿದಾ ಅವರಿಗೆ ಪ್ರಧಾನಮಂತ್ರಿ ಮೋದಿ ಅವರು ಅಭಿನಂದನೆ ಮತ್ತು ಶುಭಾಶಯಗಳನ್ನು ತಿಳಿಸಿದರು.
ಭಾರತ ಮತ್ತು ಜಪಾನ್ ನಡುವಿನ ವಿಶೇಷ ವ್ಯೂಹಾತ್ಮಕ ಮತ್ತು ಜಾಗತಿಕ ಪಾಲುದಾರಿಕೆಯ ತ್ವರಿತ ಪ್ರಗತಿಯ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಉನ್ನತ ತಂತ್ರಜ್ಞಾನ ಮತ್ತು ಭವಿಷ್ಯ ಸನ್ನದ್ಧ ವಲಯಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಇರುವ ಅವಕಾಶದ ಬಗ್ಗೆ ಸಹಮತ ವ್ಯಕ್ತಪಡಿಸಿದರು. ಹೆಚ್ಚಿನ ಹೂಡಿಕೆಯ ಮೂಲಕ ಭಾರತದ ಆರ್ಥಿಕ ಸುಧಾರಣೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಜಪಾನ್ ಕಂಪನಿಗಳಿಗೆ ಪ್ರಧಾನಿ ಆಹ್ವಾನ ನೀಡಿದರು.
ಭಾರತ-ಪೆಸಿಫಿಕ್ ವಲಯದಲ್ಲಿ ಭಾರತ ಮತ್ತು ಜಪಾನ್ ನಡುವೆ ಹೆಚ್ಚುತ್ತಿರುವ ದೃಷ್ಟಿಕೋನಗಳ ಹೊಂದಾಣಿಕೆ ಮತ್ತು ದೃಢವಾದ ಸಹಕಾರದ ಬಗ್ಗೆಯೂ ನಾಯಕರು ಚರ್ಚಿಸಿದರು. ಈ ನಿಟ್ಟಿನಲ್ಲಿ ʻಕ್ವಾಡ್ʼ ಚೌಕಟ್ಟಿನ ಅಡಿಯಲ್ಲಿ ಸಹಕಾರದ ಪ್ರಗತಿಯನ್ನು ಅವರು ಪರಿಶೀಲಿಸಿದರು.
ದ್ವಿಪಕ್ಷೀಯ ಶೃಂಗಸಭೆಗಾಗಿ ಆದಷ್ಟು ಶೀಘ್ರ ಭಾರತಕ್ಕೆ ಭೇಟಿ ನೀಡುವಂತೆ ಗೌರವಾನ್ವಿತ ಕಿಶಿದಾ ಅವರಿಗೆ ಪ್ರಧಾನಿ ಮೋದಿ ಅವರು ಆಹ್ವಾನ ನೀಡಿದರು.
***
(रिलीज़ आईडी: 1762299)
आगंतुक पटल : 327
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam