ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜೂನಿಯರ್ ವಿಶ್ವ ಚಾಂಪಿಯನ್ ಶಿಪ್ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಭಾರತೀಯ ಶೂಟಿಂಗ್ ತಂಡವನ್ನು ಶ್ಲಾಘಿಸಿದ ಪ್ರಧಾನಿ

प्रविष्टि तिथि: 10 OCT 2021 7:28PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶೂಟಿಂಗ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ 16 ಚಿನ್ನದ ಪದಕ ಸೇರಿ 40 ಪದಕಗಳನ್ನು ಸಂಪಾದಿಸುವ ಮೂಲಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತೀಯ ಶೂಟರ್ ಗಳನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ: “ನಮ್ಮ ಶೂಟರ್ ಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ! 16 ಚಿನ್ನದ ಪದಕ ಸೇರಿ 40 ಪದಕಗಳೊಂದಿಗೆ ಶೂಟಿಂಗ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್ ನ ಪದಕ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ. ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಭವಿಷ್ಯದ ಸ್ಪರ್ಧೆಗಳಿಗೆ ಶುಭವಾಗಲಿ. ಈ ಯಶಸ್ಸು ಹಲವು ಯುವ ಉದಯೋನ್ಮುಖ ಶೂಟರ್ ಗಳಿಗೆ ಸ್ಫೂರ್ತಿ ನೀಡಲಿದೆ”. ಎಂದು ಹೇಳಿದ್ದಾರೆ.

***


(रिलीज़ आईडी: 1762774) आगंतुक पटल : 309
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam