ಪ್ರಧಾನ ಮಂತ್ರಿಯವರ ಕಛೇರಿ

ಅಕ್ಟೋಬರ್ 15ರಂದು 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಭಾಷಣ ಮಾಡಲಿರುವ ಪ್ರಧಾನಮಂತ್ರಿ

Posted On: 14 OCT 2021 5:44PM by PIB Bengaluru

ವಿಜಯದಶಮಿಯ ಪವಿತ್ರ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಅಕ್ಟೋಬರ್ 15ರಂದು ಮಧ್ಯಾಹ್ನ ಸುಮಾರು 12.10ಕ್ಕೆ ರಕ್ಷಣಾ ಸಚಿವಾಲಯ ಆಯೋಜಿಸಿರುವ 7 ಹೊಸ ರಕ್ಷಣಾ ಕಂಪನಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮ ಉದ್ದೇಶಿಸಿ ವಿಡಿಯೊ ಭಾಷಣ ಮಾಡಲಿದ್ದಾರೆ.

          ರಕ್ಷಣಾ ಸಚಿವರು, ರಕ್ಷಣಾ ಖಾತೆ ಸಹಾಯಕ ಸಚಿವರು ಮತ್ತು ರಕ್ಷಣಾ ಉದ್ಯಮದ ಸಂಸ್ಥೆಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

7 ಹೊಸ ರಕ್ಷಣಾ ಕಂಪನಿಗಳ ಕುರಿತು

ದೇಶದ ರಕ್ಷಣಾ ಸನ್ನದ್ಧತೆಯಲ್ಲಿ ಸ್ವಾವಲಂಬನೆ ಸುಧಾರಿಸುವ ಕ್ರಮವಾಗಿ ಸರ್ಕಾರಿ ಇಲಾಖೆಯಿಂದ ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿಯನ್ನು ಶೇ.100ರಷ್ಟು  ಸರ್ಕಾರಿ ಒಡೆತನದ 7 ಕಾರ್ಪೊರೇಟ್ ಸಂಸ್ಥೆಗಳನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದು ಈ ಕ್ರಮವು  ಕ್ರಿಯಾತ್ಮಕ ಸ್ವಾಯತ್ತತೆ ವೃದ್ಧಿಸುತ್ತದೆ, ದಕ್ಷತೆಯನ್ನು ತರುತ್ತದೆ ಮತ್ತು ಹೊಸ ಬೆಳವಣಿಗೆಯ ಸಾಮರ್ಥ್ಯ ಮತ್ತು ನಾವೀನತ್ಯೆಯನ್ನು ಹುಟ್ಟು ಹಾಕುತ್ತದೆ.

ಸ್ಥಾಪನೆಯಾಗಿರುವ 7 ಹೊಸ ರಕ್ಷಣಾ ಕಂಪನಿಗಳೆಂದರೆ; ಮುನಿಷನ್ಸ್ ಇಂಡಿಯಾ ಲಿಮಿಟೆಡ್ (ಎಂಐಎಲ್); ಆರ್ಮೊರ್ಡ್ ವೆಹಿಕಲ್ಸ್(ಶಸ್ತ್ರ ಸಜ್ಜಿತ ವಾಹನಗಳು) ನಿಗಮ ಲಿಮಿಟೆಡ್(ಎವಿಎಎನ್ ಐ); ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಎಕ್ಯೂಪ್ ಮೆಂಟ್ ಇಂಡಿಯಾ ಲಿಮಿಟೆಡ್(ಎಡಬ್ಲ್ಯೂಇ ಇಂಡಿಯಾ); ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್(ಟಿಸಿಎಲ್); ಯಂತ್ರ ಇಂಡಿಯಾ ಲಿಮಿಟೆಡ್ (ವೈಐಎಲ್); ಇಂಡಿಯಾ ಒಪ್ಟೆಲ್ ಲಿಮಿಟೆಡ್(ಐಒಎಲ್ ) ಮತ್ತು ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್(ಜಿಐಎಲ್)

****



(Release ID: 1764056) Visitor Counter : 217