ಪ್ರಧಾನ ಮಂತ್ರಿಯವರ ಕಛೇರಿ
ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತನಾಡಿದ ಪ್ರಧಾನಿ
ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಸಂತಾಪ
Posted On:
17 OCT 2021 5:44PM by PIB Bengaluru
ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ತೀವ್ರ ದುಃಖ ವ್ಯಕ್ತಪಡಿಸಿದರು.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಿ,
"ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಕೇರಳ ಸಿಎಂ ಶ್ರೀ ಪಿಣರಾಯಿ ವಿಜಯನ್ @vijayanpinarayi ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಯಿತು. ಗಾಯಗೊಂಡವರು ಮತ್ತು ಬಾಧಿತರಿಗೆ ನೆರವು ನೀಡಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.
ಕೇರಳದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ ಕೆಲವರು ಪ್ರಾಣ ಕಳೆದುಕೊಂಡಿರುವುದು ದುಃಖತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು.” ಎಂದಿದ್ದಾರೆ.
***
(Release ID: 1765024)
Visitor Counter : 235
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam