ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಕ್ಟೋಬರ್ 21ರಂದು ನವದೆಹಲಿಯ ಏಮ್ಸ್ ನ ಝಜರ್ ಆವರಣದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ ಸದನವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

प्रविष्टि तिथि: 20 OCT 2021 4:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 2021 ಅಕ್ಟೋಬರ್ 21ರಂದು ಬೆಳಗ್ಗೆ 10.30ಕ್ಕೆ ನವದೆಹಲಿಯ ಏಮ್ಸ್ ಝಜರ್ ಆವರಣದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ ಸದನವನ್ನು ಉದ್ಘಾಟಿಸಲಿದ್ದು, ಸಂದರ್ಭದಲ್ಲಿ ಭಾಷಣ ಮಾಡಲಿದ್ದಾರೆ.

ಕ್ಯಾನ್ಸರ್ ರೋಗಿಗಳ ಆರೈಕೆಗಾಗಿ ಜೊತೆಯಲ್ಲಿ ಬಂದು ದೀರ್ಘ ಸಮಯದವರೆಗೆ ಆಸ್ಪತ್ರೆಯಲ್ಲಿಯೇ ಉಳಿಯಬೇಕಾಗುವಂತವರಿಗೆ ವಸತಿ ಸೌಲಭ್ಯ ಕಲ್ಪಿಸಲು 806 ಹಾಸಿಗೆಗಳ ಸಂಪೂರ್ಣ ಹವಾನಿಯಂತ್ರಿತ ವಿಶ್ರಾಮ ಸದನವನ್ನು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಾಣ ಮಾಡಿದೆ. ಸದನವನ್ನು ಪ್ರತಿಷ್ಠಾನ 93 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿದೆ. ಸದನವು ಎನ್.ಸಿ.. ಆಸ್ಪತ್ರೆ ಮತ್ತು ಹೊರರೋಗಿಗಳ ವಿಭಾಗಕ್ಕೆ ತುಂಬಾ ಸಮೀಪದಲ್ಲಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಮನ್ಸುಖ್ ಮಾಂಡವೀಯ, ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಕಠ್ಠರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರೂ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

***


(रिलीज़ आईडी: 1765173) आगंतुक पटल : 240
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam