ಪ್ರಧಾನ ಮಂತ್ರಿಯವರ ಕಛೇರಿ

ಹಿಮಾಚಲಪ್ರದೇಶದ ಕುಲುವಿನಲ್ಲಿ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ಶೋಕ

Posted On: 27 OCT 2021 3:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ತೊಂದರೆಗೊಳಗಾಗದ ಕುಟುಂಬಗಳಿಗೆ  ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸಂಪೂರ್ಣ ಸಜ್ಜಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದ ಬೆಂಕಿ ಅನಾಹುತ ದುಃಖಕರ. ಐತಿಹಾಸಿಕ ಮಲಾನಾ ಗ್ರಾಮದಲ್ಲಿ ಸಂಭವಿಸಿದ ಈ ದುರಂತದ ಸಂತ್ರಸ್ತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ.‘’ ಎಂದು ಹೇಳಿದ್ದಾರೆ.

***



(Release ID: 1766946) Visitor Counter : 143