ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 29 OCT 2021 5:48PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ವಿಧಿಯ ಕ್ರೂರ ಆಟ, ಮೇರು ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್‌ ಕುಮಾರ್ ಅವರನ್ನು ನಮ್ಮಿಂದ ಕಸಿದುಕೊಂಡಿದೆ. ಇದು ಸಾಯುವ ವಯಸ್ಸಲ್ಲ. ಮುಂಬರುವ ಪೀಳಿಗೆಯೂ ಅವರ ಅದ್ಭುತ ವ್ಯಕ್ತಿತ್ವ ಮತ್ತು ಕಾರ್ಯಕ್ಕಾಗಿ ಅವರನ್ನು ಪ್ರೀತಿಯಿಂದ ಸ್ಮರಿಸುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1767711) ವಿಸಿಟರ್ ಕೌಂಟರ್ : 252
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam