ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 01 NOV 2021 9:32AM by PIB Bengaluru

ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಶುಭಾಶಯ ಕೋರಿದರು.

ಪ್ರಧಾನಮಂತ್ರಿ ತಮ್ಮ ಟ್ವೀಟ್ ಸಂದೇಶದಲ್ಲಿ ಈ ರೀತಿ ಹೇಳಿದ್ದಾರೆ;

" ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ."

 

***


(ಪ್ರಕಟಣೆ ಐ.ಡಿ.: 1768364) ವಿಸಿಟರ್ ಕೌಂಟರ್ : 234