ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾದ ಮನ್ನಣೆ;  ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted On: 01 NOV 2021 8:56PM by PIB Bengaluru

ಕೋವಿಡ್-19 ಸಾಂಕ್ರಾಮಿಕ ಸೋಂಕು ನಿಯಂತ್ರಣಕ್ಕೆ ಭಾರತ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ಮಾನ್ಯತೆ (ಮನ್ನಣೆ) ನೀಡಿರುವುದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು; “ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ಆಸ್ಟ್ರೇಲಿಯಾ ದೇಶ ಮಾನ್ಯತೆ ನೀಡಿದೆ. ಇದಕ್ಕಾಗಿ ನಾನು ನನ್ನ ಆತ್ಮೀಯ ಸ್ನೇಹಿತ ಸ್ಕಾಟ್ ಮಾರಿಸನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಕೋವಿಡ್ ನಂತರದ ಭಾರತ-ಆಸ್ಟ್ರೇಲಿಯಾ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯಲು ಇದೊಂದು ಮಹತ್ವದ ಹೆಜ್ಜೆಯಾಗಿದೆ” ಎಂದು ಬಣ್ಣಿಸಿದ್ದಾರೆ.

***



(Release ID: 1768806) Visitor Counter : 179