ಪ್ರಧಾನ ಮಂತ್ರಿಯವರ ಕಛೇರಿ

ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ನೇಪಥ್ಯದಲ್ಲಿ  ಇಸ್ರೇಲ್ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 02 NOV 2021 8:04PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ಇಸ್ರೇಲ್ ನ ಪ್ರಧಾನಿ ಗೌರವಾನ್ವಿತ ಶ್ರೀ ನಫ್ತಾಲಿ ಬೆನೆಟ್ ಅವರನ್ನು ಭೇಟಿ ಮಾಡಿದರು.

ಉಭಯ ನಾಯಕರು ದ್ವಿಪಕ್ಷೀಯ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ನಡೆಸಿದರು ಮತ್ತು ವಿವಿಧ ವಲಯಗಳಲ್ಲಿ ಸಾಧಿಸಿರುವ ಪ್ರಗತಿಯ ಕುರಿತು ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೆ ಉಭಯ ನಾಯಕರು ವಿಶೇಷವಾಗಿ ಉನ್ನತ ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯಗಳಲ್ಲಿ ಸಹಕಾರ ಸಂಬಂಧ ಮತ್ತಷ್ಟು ವಿಸ್ತರಣೆಗೆ ಒಪ್ಪಿಗೆ ನೀಡಿದರು.

ಭಾರತ ಮತ್ತು ಇಸ್ರೇಲ್ ನಡುವೆ ಪೂರ್ಣ ಪ್ರಮಾಣದ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ, ಮುಂದಿನ ವರ್ಷಕ್ಕೆ 30 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರು ಶ್ರೀ ಬೆನೆಟ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನವನ್ನು ನೀಡಿದರು.

***



(Release ID: 1769102) Visitor Counter : 197