ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವೆಂಬರ್ 14ರಂದು ತ್ರಿಪುರಾದ 1.47 ಲಕ್ಷಕ್ಕೂ ಅಧಿಕ ಪಿಎಂಎವೈ-ಜಿ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ವರ್ಗಾಯಿಸಲಿರುವ ಪ್ರಧಾನಮಂತ್ರಿ

Posted On: 13 NOV 2021 5:11PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 14ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತ್ರಿಪುರಾದ 1.47 ಲಕ್ಷ ಪ್ರಧಾನಮಂತ್ರಿ ಆವಾಸ್ ಯೋಜನಾ(ಪಿಎಂಎವೈ-ಜಿ) ಫಲಾನುಭವಿಗಳಿಗೆ ಮೊದಲ ಕಂತಿನ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಇದೇ ವೇಳೆ 700 ಕೋಟಿ ರೂಪಾಯಿಗೂ ಅಧಿಕ ಹಣ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆಯಾಗಲಿದೆ.

ಪ್ರಧಾನಮಂತ್ರಿ ಅವರ ಮಧ್ಯ ಪ್ರವೇಶದ ಹಿನ್ನೆಲೆಯಲ್ಲಿ ತ್ರಿಪುರಾದ ವಿಭಿನ್ನ ಭೌಗೋಳಿ ಮತ್ತು ಹವಾಮಾನ ಪರಿಸ್ಥಿತಿಯನ್ನು ಮನಗಂಡು, ವಿಶೇಷವಾಗಿ ರಾಜ್ಯದಲ್ಲಿ ‘ಕಚ್ಚಾ’ ಮನೆಗಳ ವ್ಯಾಖ್ಯಾನವನ್ನು ಬದಲಿಸಲಾಗಿದೆ. ದೊಡ್ಡ ಸಂಖ್ಯೆಯ ಫಲಾನುಭವಿಗಳು ‘ಕಚ್ಚಾ’ ಮನೆಗಳಲ್ಲಿ ವಾಸಿಸುತ್ತಿದ್ದರು. ಅವರು ‘ಪಕ್ಕಾ’ ಮನೆಗಳ ನಿರ್ಮಾಣಕ್ಕೆ ಆರ್ಥಿಕ ನೆರವು ಪಡೆಯಲಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ತ್ರಿಪುರಾದ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

***


(Release ID: 1771674) Visitor Counter : 205