ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ನ ಬೆಂಗಾವಲು ಮೇಲೆ ಮಾಡಿದ ದಾಳಿಯನ್ನು ಖಂಡಿಸಿದ ಪ್ರಧಾನಮಂತ್ರಿ

प्रविष्टि तिथि: 13 NOV 2021 6:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ಅವರು ಇಂದು ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಬೆಂಗಾವಲು ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ಮೃತರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಅವರ ತ್ಯಾಗವನ್ನು ಮರೆಯಲಾಗದು. ಈ ಶೋಕದ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು”  ಎಂದು ಹೇಳಿದ್ದಾರೆ.

***


(रिलीज़ आईडी: 1771675) आगंतुक पटल : 219
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam