ಪ್ರಧಾನ ಮಂತ್ರಿಯವರ ಕಛೇರಿ
ನವೆಂಬರ್ 16ರಂದು ಮೊದಲ ಆಡಿಟ್ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ
प्रविष्टि तिथि:
15 NOV 2021 11:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ನವೆಂಬರ್ 16ರಂದು ಬೆಳಿಗ್ಗೆ 10.30ಕ್ಕೆ ಮೊದಲ ಆಡಿಟ್ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ ಪ್ರಧಾನಮಂತ್ರಿ ಅವರು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಸಿಎಜಿ ಸಂಸ್ಥೆಯ ಐತಿಹಾಸಿಕ ಉದಯ ಮತ್ತು ಅದು ಕಳೆದ ಹಲವು ವರ್ಷಗಳಿಂದ ಆಡಳಿತ, ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಲು ಆಡಿಟ್ ದಿನವನ್ನು ಆಚರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಭಾರತದ ಮಹಾಲೆಕ್ಕಪಾಲರು (ಸಿಎಜಿ) ಕೂಡ ಉಪಸ್ಥಿತರಿರಲಿದ್ದಾರೆ.
***
(रिलीज़ आईडी: 1771874)
आगंतुक पटल : 313
इस विज्ञप्ति को इन भाषाओं में पढ़ें:
Assamese
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam