ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವೆಂಬರ್‌ 18ರಂದು ʻತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿʼ ಕುರಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ

प्रविष्टि तिथि: 18 NOV 2021 10:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021 ನವೆಂಬರ್ 18ರಂದು ಮಧ್ಯಾಹ್ನ 12 ಗಂಟೆಗೆ ನವದೆಹಲಿಯ ಅಶೋಕ್ ಹೋಟೆಲ್‌ನಲ್ಲಿ 'ತಡೆರಹಿತ ಸಾಲದ ಹರಿವು ಮತ್ತು ಆರ್ಥಿಕ ಬೆಳವಣಿಗೆಗಾಗಿ ಸಮನ್ವಯ ಸೃಷ್ಟಿ' ಕುರಿತ ಸಮಾವೇಶದ ಸಮಾರೋಪ ಸಮಾರಂಭನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯು 2021 ನವೆಂಬರ್ 17-18ರಂದು ಸಮಾವೇಶವನ್ನು ಆಯೋಜಿಸಿದೆ. ವಿವಿಧ ಸಚಿವಾಲಯಗಳು, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು ಮತ್ತು ಕೈಗಾರಿಕಾ ಪ್ರತಿನಿಧಿಗಳು  ಇದರಲ್ಲಿ ಭಾಗವಹಿಸಲಿದ್ದಾರೆ.

ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವರು ಸಹ ಉಪಸ್ಥಿತರಿರುವರು.

***


(रिलीज़ आईडी: 1772897) आगंतुक पटल : 191
इस विज्ञप्ति को इन भाषाओं में पढ़ें: Telugu , Assamese , Gujarati , English , Urdu , Marathi , हिन्दी , Bengali , Manipuri , Punjabi , Odia , Tamil , Malayalam