ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ನಾದಿಯಾದಲ್ಲಿ ನಡೆದ ರಸ್ತೆ ಅಪಘಾತದ ಸಂತ್ರಸ್ತರಿಗೆ ಪಿಎಂ ಎನ್ ಆರ್ ಎಫ್ ನಡಿ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 NOV 2021 4:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿ (ಪಿಎಂ ಎನ್ ಆರ್ ಎಫ್) ನಡಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು.
ಪ್ರಧಾನಮಂತ್ರಿಗಳು ತಮ್ಮ ಟ್ವೀಟ್ ನಲ್ಲಿ “ಪ್ರಧಾನಮಂತ್ರಿಗಳು ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿ (ಪಿಎಂಎನ್ಆರ್ಎಫ್)ನಡಿ ನೀಡುವುದಾಗಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗುವುದು’’ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1775945)
ವಿಸಿಟರ್ ಕೌಂಟರ್ : 259
ಪ್ರಕಟಣೆಯನ್ನು ಇದರಲ್ಲಿ ಓದಿ:
Tamil
,
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam