ಪ್ರಧಾನ ಮಂತ್ರಿಯವರ ಕಛೇರಿ

ತೆಲುಗು ಚಲನಚಿತ್ರ ರಂಗದ ಹೆಸರಾಂತ ಗೀತೆರಚನೆಕಾರ ಸಿರಿವೆನ್ನೆಲ ಸೀತಾರಾಮ ಶಾಸ್ತ್ರೀ ನಿಧನಕ್ಕೆ ಪ್ರಧಾನಮಂತ್ರಿ ಶೋಕ

Posted On: 30 NOV 2021 8:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲುಗು ಚಿತ್ರ ರಂಗದ ಹೆಸರಾಂತ ಗೀತೆ ರಚನೆಕಾರ ಮತ್ತು ಪದ್ಮಶ್ರೀ  ಪ್ರಶಸ್ತಿ ಪುರಸ್ಕೃತ ಸಿರಿವೆನ್ನೆಲ ಸೀತಾರಾಮ ಶಾಸ್ತ್ರೀ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಹಲವಾರು ಕೃತಿಗಳಲ್ಲಿ ಅವರ ಕಾವ್ಯದ ಪ್ರೌಢಿಮೆ ಮತ್ತು ಬಹುಮುಖ ಪ್ರತಿಭೆಯನ್ನು ಕಾಣಬಹುದಾಗಿದೆ. ತೆಲುಗನ್ನು ಜನಪ್ರಿಯಗೊಳಿಸಲು ಹಲವು ಪ್ರಯತ್ನಗಳನ್ನು ಮಾಡಿದ್ದರು. ಅವರ ಕುಟುಂಬ ಮತ್ತು ಮಿತ್ರರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***(Release ID: 1776826) Visitor Counter : 159