ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕೆ. ರೋಶಯ್ಯ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 04 DEC 2021 12:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಶ್ರೀ ಕೆ. ರೋಶಯ್ಯ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಶ್ರೀ ಕೆ. ರೋಶಯ್ಯ ಅವರ ನಿಧನದಿಂದ ದುಃಖಿತನಾಗಿದ್ದೇನೆ. ನಾವಿಬ್ಬರೂ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದಾಗ ಮತ್ತು ನಂತರ ಅವರು ತಮಿಳುನಾಡು ರಾಜ್ಯಪಾಲರಾಗಿದ್ದಾಗ ಅವರೊಂದಿಗೆ ನಾನು ನಡೆಸಿದ ಸಂವಾದಗಳು ನನಗೆ ನೆನಪಾಗುತ್ತಿವೆ. ಸಾರ್ವಜನಿಕ ಸೇವೆಗೆ ಅವರು ನೀಡಿದ ಕೊಡುಗೆಗಳು ಅವಿಸ್ಮರಣೀಯ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ,” ಎಂದಿದ್ದಾರೆ.

***



(Release ID: 1778057) Visitor Counter : 198