ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದ ಲಸಿಕಾ ಅಭಿಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿರುವ ಬಗ್ಗೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ

Posted On: 06 DEC 2021 10:35AM by PIB Bengaluru

ಭಾರತದ ಲಸಿಕಾ ಅಭಿಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದ 50% ಕ್ಕೂ ಹೆಚ್ಚು ಅರ್ಹ ಜನಸಂಖ್ಯೆ ಇದೀಗ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಂಡಿದೆ.

ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಮನ್ಸುಖ್ ಮಾಂಡವೀಯ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಯವರು, “ಭಾರತದ ಲಸಿಕಾ ಅಭಿಯಾನ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಗೊಳಿಸಲು ಆವೇಗವನ್ನು ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಹೌದು ಮತ್ತು ಮುಖಗವಸು ಧರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಇತರೆ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿಎಂದು ಹೇಳಿದ್ದಾರೆ.

***


(Release ID: 1778407) Visitor Counter : 150